ಮಂಗಳೂರು

“ಕುಳಾಯಿ ಫೌಂಡೇಶನ್”ನಿಂದ 250 ಬಡಮಕ್ಕಳ ದತ್ತು ಸ್ವೀಕಾರ”: ಪ್ರತಿಭಾ ಕುಳಾಯಿ

ಸುರತ್ಕಲ್: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯವನ್ನಿಟ್ಟುಕೊಂಡು ಸ್ಥಾಪಿಸಿರುವ “ಕುಳಾಯಿ ಫೌಂಡೇಶನ್” ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 250 ಮಂದಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆ ಹಾಕಿಕೊಂಡಿದೆ ಎಂದು ಫೌಂಡೇಶನ್ ಸ್ಥಾಪಕಿ ಪ್ರತಿಭಾ ಕುಳಾಯಿ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಿಕೊಂಡು ಮುನ್ನಡೆಯುತ್ತಿರುವ ಫೌಂಡೇಶನ್ ಮೂಲಕ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು ಮಾತ್ರವಲ್ಲದೆ ಅವರ ಮುಂದಿನ ಉದ್ಯೋಗ ಭದ್ರತೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

2019ರಲ್ಲಿ ಸ್ಥಾಪನೆಯಾಗಿರುವ ಕುಳಾಯಿ ಫೌಂಡೇಶನ್ ಈಗಾಗಲೇ 131 ಮಂದಿ ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡುತ್ತಾ ಬಂದಿದೆ. ಕಳೆದ ಎರಡು ವರ್ಷಗಳ ಕೊರೋನಾ ಹಾವಳಿ, ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರಿನ ಹಂಪನಕಟ್ಟೆಯಲ್ಲಿ ಪ್ರತಿನಿತ್ಯ 250 ಮಂದಿ ಕೂಲಿ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಊಟ ನೀಡಿದ್ದಲ್ಲದೆ ಕಿಟ್ ಗಳನ್ನು ವಿತರಿಸಿ ಮಾನವೀಯತೆಯನ್ನು ಮೆರೆದಿದೆ. ಕುಳಾಯಿ ಫೌಂಡೇಶನ್ ವತಿಯಿಂದ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳನ್ನು ದತ್ತು ಪಡೆದು ಆಂಗ್ಲಮಾಧ್ಯಮ ಕಲಿಕೆಗೆ ಒತ್ತು ನೀಡುವ ಕಾರ್ಯಕ್ರಮ ರೂಪಿಸಲಾಗುವುದು ಅಲ್ಲದೆ ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭವಾಗಿದ್ದು ಫೀಸ್ ಕಟ್ಟಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ತಕ್ಷಣವೇ ಫೀಸ್ ಕಟ್ಟಲು ಆರ್ಥಿಕವಾಗಿ ಸಹಾಯ ಮಾಡಲಾಗುವುದು, ಮುಖ್ಯವಾಗಿ ಪಿಯು, ಪದವಿ, ಡಿಪ್ಲೋಮ, ಐಟಿಐ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು ಅಥವಾ ಫೋನ್ ನಂಬರ್ ಸಂಪರ್ಕಿಸಲು ಕೋರಿದ್ದಾರೆ.

ಪ್ರತಿಭಾ ಕುಳಾಯಿ
ಕುಳಾಯಿ ಫೌಂಡೇಶನ್
ವಿ.ಟಿ. ರೋಡ್
ಕುಳಾಯಿ ಮಂಗಳೂರು
575019
ಮೊಬೈಲ್ ಸಂಖ್ಯೆ : 9964756410

Ashika S

Recent Posts

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

16 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

27 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

42 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

59 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

2 hours ago