News Karnataka Kannada
Tuesday, April 30 2024
ಮಂಗಳೂರು

ಕುಮಾರಧಾರ ಸ್ನಾನ ಘಟ್ಟ ಮುಳುಗಡೆ: ಪ್ರವಾಹ ರಕ್ಷಣಾ ತಂಡದ ಸದಸ್ಯರಿಗೆ ಮಾರ್ಗದರ್ಶನ

Kumaradhara bathing ghat submerged: Guidance to flood rescue team members
Photo Credit : News Kannada

ಸುಬ್ರಹ್ಮಣ್ಯ: ಘಟ್ಟದ ಮೇಲ್ಬಾಗದಲ್ಲಿ ಮತ್ತು ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ನದಿಗಳು ತುಂಬಿಹರಿಯುತ್ತಿದ್ದು, ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ.

ರವಿವಾರ ಗೃಹ ರಕ್ಷಕ ದಳದ ದ.ಕ. ಜಿಲ್ಲಾ ಸಮಾದೇಷ್ಟ ಡಾ.ಮುರಲಿ ಮೋಹನ್ ಚೂಂತಾರು ಅವರು ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಸ್ಥಳಕ್ಕೆ ಭೇಟಿ ನೀಡಿ ಪ್ರವಾಹ ರಕ್ಷಣಾ ತಂಡದ ಸದಸ್ಯರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು. ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಯಾವುದೇ ಕಾರಣಕ್ಕೂ ಪ್ರವಾಸಿಗರು ಮತ್ತು ಭಕ್ತರು ನೀರಿಗೆ ಇಳಿಯದಂತೆ ನಿಯಂತ್ರಿಸಲು ಆದೇಶಿಸಿದರು.

ಪ್ರವಾಸಿಗರು ಮತ್ತು ಭಕ್ತಾದಿಗಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ಹರೀಶ್ ಹಾಗೂ ಪ್ರವಾಹ ರಕ್ಷಣಾ ತಂಡದ ಇತರ ಗೃಹ ರಕ್ಷಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು