ಕುಂದಾಪುರ: ಪತಿಯನ್ನು ತ್ಯಜಿಸಿದ್ದ ಹೊರರಾಜ್ಯದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿ ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಮಹಿಳೆಯ ಅಪ್ರಾಪ್ತ ವಯಸ್ಕ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ನಡೆದಿದೆ.
ದೂರು ದಾಖಲಾದ ಹಿನ್ನಲೆಯಲ್ಲಿ ತನಿಖೆ ನಡೆಸಿದ ಕುಂದಾಪುರ ಪೊಲೀಸರ ತಂಡ ಪೊಕ್ಸೋ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಆರೊಪಿಯನ್ನು ಬೈಂದೂರಿನ ನಿವಾಸಿ ಸೊಹೇಲ್ ಎಂದು ಗುರುತಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಮಹಿಳೆಯ ಮಗಳಿಗೆ ಸೊಹೇಲ್ ಲೈಂಗಿಕ ಕಿರುಕುಳ ನೀಡುತ್ತಿದ್ದ. ಹೀಗಾಗಿ ಆಕೆ ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದರು. ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ಆತನ ಮನೆಗೆ ಕರೆದೊಯ್ದು ಇಬ್ಬರನ್ನು ಕೋಣೆಯಲ್ಲಿ ಕೂಡಿ ಹಾಕಿ, ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು ಎಂದು ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.