ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ನ. 23ರಂದು ಲಕ್ಷ ದೀಪೋತ್ಸವ ನಡೆಯಲಿದೆ. ‘ಚಂಪಾಷಷ್ಠಿ ಮಹೋತ್ಸವಕ್ಕೆ ನ.21ರ ಕಾರ್ತಿಕ ದ್ವಾದಶಿಯಂದು ಬೆಳಿಗ್ಗೆ ಕೊಪ್ಪರಿಗೆ ಏರುವ ಮೂಲಕ ಚಾಲನೆ ಲಭಿಸಲಿದೆ.
ಡಿ.5 ಮಾರ್ಗಶಿರ ಶುದ್ಧ ದ್ವಾದಶಿಯಂದು ಬೆಳಿಗ್ಗೆ ಕೊಪ್ಪರಿಗೆ ಇಳಿದು, ರಾತ್ರಿ ನೀರು ಬಂಡಿ ಉತ್ಸವ, ದೈವಗಳ ನಡಾವಳಿ ನಡೆಯುವುದರೊಂದಿಗೆ ಸಂಪನ್ನಗೊಳ್ಳಲಿದೆ’ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ ರಾಂ ಸುಳ್ಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲಕ್ಷ ದೀಪೋತ್ಸವದ ದಿನ ಸಂಜೆ 7ರಿಂದ ದೇವಳದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ, ಕಾಶಿಕಟ್ಟೆಯಾಗಿ ಕುಮಾರಧಾರಾದವರೆಗೆ ಕುಣಿತ ಭಜನೆ ಆಯೋಜಿಸಲಾಗಿದೆ. ಕುಣಿತ ಭಜನೆಯಲ್ಲಿ 1 ಸಾವಿರ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಭಾಗವಹಿಸುವ ತಂಡಗಳು ನ. 20 ಒಳಗಾಗಿ ದೇವಳದ ಕಚೇರಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು.
ಮಾಹಿತಿಗೆ: 9482646275, ಸಂಪರ್ಕಿಸಬಹುದು ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೊಂದಾಯಿಸಿಕೊಳ್ಳಬಹುದು’ ಎಂದರು.