Categories: ಮಂಗಳೂರು

ಕಷ್ಟಕಾರ್ಪಣ್ಯಗಳ ನಡುವೆ ದೇವರಲ್ಲಿ ಭರವಸೆಯಿಟ್ಟು ಬಾಳೋಣ : ಬೆಳ್ತಂಗಡಿ ಬಿಷಪ್ ಲೋರೆನ್ಸ್ ಮುಕುಝಿ

ಕಾರ್ಕಳ: ಪ್ರಾಪಂಚಿಕ ಅನುಭವಗಳಾದ ಕಷ್ಟಕಾರ್ಪಣ್ಯಗಳು, ದುಷ್ಟತನಗಳು ನಮ್ಮನ್ನು ಧೃತಿಗೆಡುವಂತೆ ಮಾಡುತ್ತವೆ. ಪವಿತ್ರ್ ಆತ್ಮರ ಕೃಪೆಯಿಂದ ಅವುಗಳ ಮೇಲೆ ಜಯ ಸಾಧಿಸಿ, ದೇವರಲ್ಲಿ ಅಚಲ ನಂಬಿಕೆಯಿಟ್ಟು ಅವರ ಸಾಕ್ಷಿಗಳಾಗಿ ಬಾಳಿದಾಗ ಮತ್ತು ಒಳಿತನ್ನು ಮಾಡಿದಾಗ ನಾವು ಆಶರ‍್ವಾದವನ್ನು ಪಡೆಯುತ್ತೇವೆ” ಎಂದು ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡೊ. ಲೋರೆನ್ಸ್ ಮುಕುಝಿ ಪ್ರಬೋಧನೆ ನೀಡಿದರು.

ಅವರು ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ಮಹೋತ್ಸವದ ಮೂರನೇ ದಿನವಾದ ಮಂಗಳವಾರದಂದು ಪ್ರಮುಖ ಬಲಿಪೂಜೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ವಾರ್ಷಿಕ ಮಹೋತ್ಸವದ ಮೂರನೇ ದಿನವಾದ ಮಂಗಳವಾರದAದು ಈ ಪುಣ್ಯಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿತು. ಅಸ್ವಸ್ಥರಿಗಾಗಿ ವಿಶೇಷವಾಗಿ ಪೂಜೆ ಪ್ರಾರ್ಥನೆಗಳ್ನು ನೆರವೇರಿಸಲಾಯಿತು.

ದಿನದ ಏಕೈಕ ಪ್ರಮುಖ ಬಲಿಪೂಜೆಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡೊ. ಲೋರೆನ್ಸ್ ಮುಕುಝಿಯವರು ನೆರವೇರಿಸಿದರು. ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಟಗುರು ಅತಿ ವಂದನೀಯ ಮ್ಯಾಕ್ಸಿಮ್ ನೊರೊನ್ಹಾ ಬೆಳಿಗ್ಗೆ ೧೦ ಗಂಟೆಯ ಬಲಿಪೂಜೆಯನ್ನು ಅರ್ಪಿಸಿದರು. ದಿನದ ಇತರ ಬಲಿಪೂಜೆಗಳನ್ನು ವಂದನೀಯ ಆಲ್ವಿನ್ ಸಿಕ್ವೇರಾ, ಕಟ್ಕೆರೆ; ವಂದನೀಯ ವೀರೇಶ್ ಮೋರಸ್, ಶಿವಮೊಗ್ಗ; ವಂದನೀಯ ತೋಮಸ್ ರೋಶನ್ ಡಿಸೋಜಾ, ಗಂಗೊಳ್ಳಿ; ವಂದನೀಯ ಆ್ಯಂಡ್ರು ಡಿಸೋಜಾ, ಬೋಂದೆಲ್ ಇವರು ನೆರವೇರಿಸಿದರು.

ವಂದನೀಯ ವಿಕ್ಟರ್ ಡಿಮೆಲ್ಲೊ, ಪಾನೀರ್ ಇವರು ನೆರವೇರಿಸಿದ ದಿನದ ಅಂತಿಮ ಬಲಿಪೂಜೆಯೊಡನೆ ಮಹೋತ್ಸವದ ಮೂರನೇ ದಿನದ ಕಾರ್ಯಕ್ರಮಗಳು ಸಂಪನ್ನಗೊಂಡವು.

ಮಾಜಿ ಶಾಸಕರಾದ ಶ್ರೀ ಅಭಯಚಂದ್ರ ಜೈನ್ ಮತ್ತು ಶ್ರೀ ವಿನಯ್ ಕುಮಾರ್ ಸೊರಕೆಯವರು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಸಂತ ಲಾರೆನ್ಸರ ಅನುಗ್ರಹವನ್ನು ಪಡೆದರು.

ಮಹೋತ್ಸವದ ನಾಲ್ಕನೇ ದಿನ ಬುಧವಾರ ಬೆಳಿಗ್ಗೆ ೮, ೧೦, ೧೨ ಹಾಗೂ ಮಧ್ಯಾಹ್ನ ೨, ೪, ೬ ಮತ್ತು ೮ ಗಂಟೆಗೆ ಬಲಿಪೂಜೆಗಳು ನೆರವೇರಲಿವೆ.

ಮಧ್ಯಾಹ್ನ ೧೨ ಗಂಟೆಯ ಬಲಿಪೂಜೆ ಕನ್ನಡ ಭಾಷೆಯಲಿದ್ದು, ೧೦ ಗಂಟೆಯ ವಿಶೇಷ ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಪರಮಪೂಜ್ಯ ಡೊ| ಅಲೋಶಿಯಸ್ ಪಾವ್ಲ್ ಡಿಸೋಜಾರವರು ನೆರವೇರಿಸಿ ಪ್ರಬೋಧನೆ ನೀಡಲಿದ್ದಾರೆ.

Sneha Gowda

Recent Posts

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

4 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

18 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

26 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

30 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

40 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

44 mins ago