Categories: ಮಂಗಳೂರು

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ, ಕಾಂಗ್ರೆಸ್‌ ಅಭ್ಯರ್ಥಿ ಜೆ. ಆರ್‌. ಲೋಬೋ ಹೇಳಿಕೆ

ಮ೦ಗಳೂರು: ಜೆಪ್ಪಿನ ಮೊಗರು ವಾರ್ಡಿನಲ್ಲಿ ಮ೦ಗಳವಾರ ಕಾಂಗ್ರೆಸ್ ನಿ೦ದ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು. ಪಕ್ಷದ ಅಭ್ಯರ್ಥಿ ಜೆ. ಆರ್. ಲೋಬೊ ಅವರು ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ಸಂಪರ್ಕಿಸಿ ಕಾಂಗ್ರಸಿಗೆ ಮತ ನೀಡಬೇಕೆಂದು ವಿನಂತಿಸಿದರು.

ಜೆಪ್ಪಿನ ಮೊಗರುವಿನ ಶ್ರೀ ದುರ್ಗಾಪರಮೇಶರಿ ದೇವಸ್ಥಾನ,ಕರ್ಮಿಸ್ಥಾನ ವೈದ್ಯನಾಥ ದೈವಸ್ಥಾನ, ಕೊರ್ಧಬ್ಬು ದೈವಸ್ಥಾನ, ಜಪ್ಪು ಗುಡ್ಡೆಗುತ್ತು ನಾಗ ಸನ್ನಿದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ತಾನು ಶಾಸಕನಾಗಿದ್ದ ಅವಧಿಯಲ್ಲಿ ಜೆಪ್ಪಿನ ಮೊಗರು ಸಹಿತ ಬಜಾಲ್, ಅಳಪೆ, ಮೊದಲಾದಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಒತ್ತನ್ನು ಕೊಟ್ಟು ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದೇನೆ. ರಸ್ತೆ ಅಗಲೀಕರಣ, ಕಾಂಕ್ರೀಟ್ ಕರಣ, ಕೆರೆಗಳಅಭಿವೃದ್ಧಿ ಕಾರ್ಯ ಈ ಭಾಗದಲ್ಲಿ ಬಹಳಷ್ಟು ನಡೆದಿದೆ. ಮುಂದೆಯೂ ಅಧಿಕಾರ ನೀಡಿದಲ್ಲಿ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿರುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಎಂಎಲ್ ಸಿ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ,ಬ್ಲಾಕ್ ಅಧ್ಯಕ್ಷ ಸಲಿಂ, ಕಾರ್ಪೊರೇಟರ್ ಪ್ರವೀಣ್ ಆಳ್ವ,ಮಾಜಿ ಕಾರ್ಪೊರೇಟರ್ ನಾಗೇಂದ್ರ ಕುಮಾರ್, ವಾರ್ಡ್ ಅಧ್ಯಕ್ಷ ಸುಧಾಕರ್, ಕರುಣಾಕರ ಶೆಟ್ಟಿ ತರ್ದೋಲ್ಯ, ಸುನಿಲ್ ಕುಮಾರ್ ಪೂಜಾರಿ,ಓಸ್ವಲ್ಡ್ ಫುರ್ತಾದೋ, ಸುಧೀರ್ ಕಡೇಕರ್, ಹಾರ್ಬಟ್ ಡಿಸೋಜಾ, ದುರ್ಗಾ ಪ್ರಸಾದ, ನವೀನ್ ಸ್ಟಿವನ್, ಹೈದರ್ ಆಲಿ, ಶೈಲೇಶ್ ಭಂಡಾರಿ,ಹರೀಶ್ ಶೆಟ್ಟಿ, ಶಾಂತಿ, ಕವಿತ ಶೆಟ್ಟಿ, ದಿನೇಶ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

Umesha HS

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

43 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

44 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

1 hour ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

1 hour ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 hour ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

1 hour ago