ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಕುರಿತು ಕಾಂಗ್ರೆಸ್ನಲ್ಲಿ ಭಾರಿ ಚಟುವಟಿಕೆ ನಡೆಯುತ್ತಿದೆ. ಈ ಕುರಿತು ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಗೆ ಸಂಬಂಧಪಟ್ಟಂತೆ ಜಿಲ್ಲಾ ಚುನಾವಣಾ ಉಸ್ತುವಾರಿ, ಸಚಿವ ಮಧು ಬಂಗಾರಪ್ಪ ಎರಡನೇ ಸುತ್ತಿನ ಮಹತ್ವದ ಸಭೆ ಇಂದು ಸಂಜೆ 5.30ಕ್ಕೆ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಪಕ್ಷದ ಜಿಲ್ಲೆಯ ಎಲ್ಲಾ ಪ್ರಮುಖ ನಾಯಕರು ಪಾಲ್ಗೊಳ್ಳಲು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಇದೇ ವಿಚಾರವಾಗಿ ಸಚಿವ ಮಧು ಬಂಗಾರಪ್ಪ ಅವರು 2 ತಿಂಗಳ ಹಿಂದಷ್ಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭ್ಯರ್ಥಿಯ ಆಯ್ಕೆ ಕುರಿತು ಸಭೆಯನ್ನುಮಾಡಿದ್ದರು. ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡರು, ಮಾಜಿ ಸಂಸದರು, ಮಾಜಿ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಶಿಕ್ಷಣ ತಜ್ಞರು, ಕೈಗಾರಿಕೋದ್ಯಮಿಗಳ ಅಭಿಪ್ರಾಯ ಸಂಗ್ರಹಿಸಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವರದಿಯನ್ನು ನೀಡಿದ್ದರು.
ಇದೀಗ ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ನಡೆಸಿ ನಾಯಕರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಈ ಸಭೆಯ ವರದಿಯನ್ನು ಸಚಿವರು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರಿಗೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.