News Karnataka Kannada
Sunday, April 28 2024
ಮಂಗಳೂರು

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾರಥೋತ್ಸವ

Maharathotsava at Vitla
Photo Credit : News Kannada

ಬಂಟ್ವಾಳ : ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಶ್ರೀ ದೇವರ ಮಹಾರಥೋತ್ಸವ ‘ಇಟ್ಟೆಲಾಯನೊ’ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಮಂದಿ ಭಕ್ತಾದಿಗಳ ಭಕ್ತಿಯ ಪರಾಕಾಷ್ಠೆಯೊಂದಿಗೆ ಈ ಪುಣ್ಯ ಕ್ಷಣವನ್ನು ಕಣ್ತುಂಬಿಸಿಕೊಂಡರು.

ಕಡಂಬು ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿದ ಬಳಿಕ ದೇವರ ಬಲಿ ಉತ್ಸವ ನಡೆಯಿತು. ನಂತರ ದೇಗುಲದ ಮುಂಭಾಗದ ರಥ ಗದ್ದೆಯಲ್ಲಿ ಅತ್ಯಾಕರ್ಷಕ ಸುಡುಮದ್ದು ಪ್ರದರ್ಶನ ನಡೆಯಿತು.

ಸರ್ವಾಲಂಕಾರದ ಬೃಹತ್ ಗಾತ್ರದ ರಥದಲ್ಲಿ ದೇವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ನಡೆಯಿತು. ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಭಕ್ತ ಗಡಣ ರಥೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಯಿತು.

ರಥೋತ್ಸವದ ಬಳಿಕ ದೇವರ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು