ಮಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ [ಸೆ.11] ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ.
ಈ ಕುರಿತು ಆರೋಗ್ಯ ಹಾಗೂ ದಕ್ಷಿಣ ಕನ್ನಡ ಸಚಿವ ಗುಂಡೂರಾವ್ ಎಕ್ಸ್ ಮಾಡಿದ್ದಾರೆ. ಸ್ಯಾನಿಟರಿ ನ್ಯಾಪ್ಕಿನ್ ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಹಾಗೂ ದೀರ್ಘ ಬಾಳಿಕೆ ಬರುವ ಮೆನ್ ಸ್ಟ್ರುಯಲ್ ಕಪ್ ಗಳನ್ನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ.
ಪ್ರಾಯೋಗಿಕವಾಗಿ ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಎರಡು ಜಿಲ್ಲೆಗಳಲ್ಲಿ ʻನನ್ನ ಮೈತ್ರಿʼಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಚಿವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ [ಸೆ.11] ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ.
1/2 pic.twitter.com/FlaV6FAcf8— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 10, 2023