News Karnataka Kannada
Tuesday, May 07 2024
ಮಂಗಳೂರು

ಟೆಲಿಗ್ರಾಮ್‌ ಮೂಲಕ ವಂಚನೆಗೆ ಯತ್ನ: ಆರೋಪಿ ಸೆರೆ

Man arrested for attempting to cheat via Telegram
Photo Credit : News Kannada

ಬೆಳ್ತಂಗಡಿ: ಟೆಲಿಗ್ರಾಮ್‌ ಮೂಲಕ ನಕಲಿ ಖಾತೆಯಿಂದ ಶಿಕ್ಷಕಿಯೋರ್ವರಿಗೆ ಬೆದರಿಕೆ ಹಾಕಿರುವುದಲ್ಲದೆ ಒಂದು ಲಕ್ಷ ರೂ. ವಸೂಲಿಗೈದು ವಂಚನೆ ಎಸಗಿರುವ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯಡಿ ವೇಣೂರು ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ ಹೆಬ್ಬಾರ್ (23 ವ) ಆರೋಪಿಯಾಗಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಎಂಬವರಿಗೆ ನಕಲಿ ಟೆಲಿಗ್ರಾಂ ಖಾತೆ ಬಳಸಿ ಮೂರು ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದ. ಹಣ ನೀಡದೆ ಹೋದಲ್ಲಿ ಪತಿಗೆ ಜೀವಹಾನಿ ಮಾಡುವುದಾಗಿ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ.

ಈ ಬಗ್ಗೆ ಜ್ಯೋತಿ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆಗಿಳಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ., ಆನಂದ ಎಂ. ಪೊಲೀಸರ ತಂಡ ಆ.2ರಂದು ಮಧ್ಯರಾತ್ರಿ ತೆಂಕಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿಂದ ಬಂಧಿಸಿದ್ದಾರೆ.

 ಸಿನಿಮೀಯ ರೀತಿ ಪ್ರಕರಣ: ಮೂರು ಲಕ್ಷ ರೂ. ಬೇಡಿಕೆ ಇಟ್ಟಿದ್ದ ಆರೋಪಿಗೆ ಒಂದು ಲಕ್ಷ ರೂ. ನೀಡುವುದಾಗಿ ಆರೋಪಿಯನ್ನು ಟೆಲಿಗ್ರಾಂನಲ್ಲಿ ಒಪ್ಪಿಸಿದಂತೆ ಆರೋಪಿ ಆ.2 ರಂದು ಸಂಜೆ ಅಳದಂಗಡಿ ಕದ್ದು ಸಮೀಪ ಹಣ ಎಸೆದು ಹೋಗಲು ಸೂಚಿಸಿದ್ದ. ಬಳಿಕ ಅಲ್ಲಿ ಎಸೆಯಬೇಡಿ ಎಂದು ಸಂದೇಶ ರವಾನಿಸಿ ಬೇರೊಂದು ಸ್ಥಳವನ್ನು ಸೂಚಿಸಿದ್ದ. ಹೀಗೆ ಮೂರ್‍ನಾಲ್ಕು ಬಾರಿ ಸ್ಥಳವನ್ನು ಬದಲಾಯಿಸುತ್ತಾ ಸಂದೇಶದಲ್ಲೆ ವ್ಯವಹರಿಸುತ್ತಿದ್ದ ಆರೋಪಿ ಶಿರ್ಲಾಲು ಸವಣಾಲು ಕ್ರಾಸ್ ಬಳಿ ಹಣವನ್ನು ವಾಹನದಿಂದ ಎಸೆದು ಹೋಗುವಂತೆ ತಿಳಿಸಿದ್ದ. ಅದರಂತೆ ಹಣದ ಬ್ಯಾಗನ್ನು ಎಸೆದು ಹೋಗಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಹಣದ ಪ್ಯಾಕನ್ನು ಪಡೆಯುವಷ್ಟರಲ್ಲಿ ಮೊದಲೇ ಕಾದು ಕುಳಿತಿದ್ದ ಪೊಲೀಸರು ಹಿಡಿಯಲು ಯತ್ನಿಸಿದ್ದಾರೆ.

ಆದರೆ ಅಚಾನಕ್ ಆಗಿ ತಪ್ಪಿಸಿಕೊಂಡಿದ್ದ ಆರೋಪಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ, ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ತಡರಾತ್ರಿ ಆತನ ಅಣ್ಣನ ಮನೆ ಗುಂಡೇರಿ ಸಮೀಪ ದಸ್ತಗಿರಿ ಮಾಡಿ ಆತ ವಸೂಲಿ ಮಾಡಿದ್ದ ಒಂದು ಲಕ್ಷ ರೂ. ನಗದು, ಕೃತ್ಯಕ್ಕೆ ಉಪಯೋಗಿಸಿದ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು