Categories: ಮಂಗಳೂರು

ಕಂಕನಾಡಿ ವಸತಿಗೃಹದಲ್ಲಿ ಬೆಂಕಿ ಅವಘಡ: ವ್ಯಕ್ತಿ ಸಾವು

ಮಂಗಳೂರು: ನಗರದ ಕಂಕನಾಡಿ ಬೆಂದೂರ್ ವೆಲ್‌ನ ‘ಹೋಟೆಲ್ ರೆಸಿಡೆನ್ಸಿ’ ವಸತಿಗೃಹದಲ್ಲಿ ಬುಧವಾರ ಮಧ್ಯರಾತ್ರಿ(ನ.22) ಸಂಭವಿಸಿದ ಬೆಂಕಿ ದುರಂತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ನಗರದ ಬಿಕರ್ನಕಟ್ಟೆಯ ಯಶರಾಜ್ ಸುವರ್ಣ (43) ಮೃತರು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಅವರು ನ. 15ರಿಂದ ಈ ಕೊಠಡಿಯನ್ನು ಬಾಡಿಗೆಗೆ ಪಡೆದು ಅಲ್ಲೇ ಉಳಿದುಕೊಂಡಿದ್ದರು ಎಂದು ಹೋಟೆಲ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

‘ಕಂಕನಾಡಿ ಬೆಂದೂರ್ ವೆಲ್ ನ ವಸತಿಗೃಹವೊಂದರ ಎರಡನೇ ಮಹಡಿಯಲ್ಲಿದ್ದ ಕೊಠಡಿಗೆ ಬೆಂಕಿ ಹೊತ್ತಿರುವ ಬಗ್ಗೆ ಬುಧವಾರ ರಾತ್ರಿ. 12.35 ರ ವೇಳೆಗೆ ಮಾಹಿತಿ ಬಂದಿತ್ತು. ನಮ್ಮ‌ ಸಿಬ್ಬಂದಿ ಸ್ಥಳಕ್ಕೆ ತಲುಪಿ, ಬೆಂಕಿ ನಂದಿಸಿದರು. ಬೆಂಕಿಯಿಂದ ಭಾಗಶಃ ಸುಟ್ಟುಹೋಗಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸುವ ಪ್ರಯತ್ನ ಮಾಡಿದೆವು. ಆದರೆ, ಅವರನ್ನು ಉಳಿಸಿಕೊಳ್ಳಕು ಸಾಧ್ಯವಾಗಲಿಲ್ಲ ಎಂದು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರಂಗನಾಥ್ ತಿಳಿಸಿದ್ದಾರೆ. ಇನ್ನು ಈ ಘಟನೆ ಆತ್ಮಹತ್ಯೆಯೋ..? ಶಾಟ್ ಸರ್ಕ್ಯೂಟ್ ನಿಂದ ಆಗಿದೆಯೆ ಎಂದು ತನಿಖೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಮಂಗಳೂರು ಕದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gayathri SG

Recent Posts

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

2 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

11 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

14 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

29 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

30 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

35 mins ago