News Karnataka Kannada
Friday, May 03 2024
ಮಂಗಳೂರು

ಮಂಗಳೂರು: 17 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ

Bengaluru: Win the best picture prize in the polls
Photo Credit : News Kannada

ಮಂಗಳೂರು, ಏ.19: ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಪ್ರಿಲ್ 19 ರ ಬುಧವಾರ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಇವರ ಇಂತಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಹೇಶ್ ನಾಮಪತ್ರ ಸಲ್ಲಿಸಿದ್ದಾರೆ. ಮೂಡುಬಿದರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರ ಎಸ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ದಯಾನಂದ, ಪಕ್ಷೇತರ ಅಭ್ಯರ್ಥಿಯಾಗಿ ಮ್ಯಾಕ್ಸಿಂ ಪಿಂಟೋ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಅದರಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಎಚ್. ವಿನಯ್ ಆಚಾರ್ಯ, ಹಿಂದುಸ್ತಾನ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಬಿ. ಪ್ರವೀಣ್ ಚಂದ್ರರಾವ ಹಾಗೂ ಆಮ್ ಆದ್ಮಿ ಪಕ್ಷದಿಂದ ಸಂದೀಪ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್ ಕಾಮತ್, ಅಖಿಲ ಭಾರತ ಹಿಂದೂ ಮಹಾಸಭಾ ಅಭ್ಯರ್ಥಿಯಾಗಿ ಧರ್ಮೇಂದ್ರ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಿತಿನ್ ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ವಿನ್ಸಿ ಪಿಂಟೋ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಇಸ್ಮಾಯಿಲ್ ಕೆ. ಶಫಿ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಪಿ. ಇಬ್ರಾಹಿಂ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ 2 ಸೆಟ್ ನಾಮಪತ್ರಗಳನ್ನು ಸಲ್ಲಿಸಿದರೆ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಐವಾನ್ ಪೇರಾವೋ ಪಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೋಯಿಲಾ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಎಚ್. ವೆಂಕಟೇಶ್ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳೂರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರಗಳು ಸ್ವೀಕೃತವಾಗಿಲ್ಲ, ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು