ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮೇಶ್ವರ ದ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭ ಮಂಗಳೂರು ಕ್ಷೇತ್ರ ಅಭ್ಯರ್ಥಿ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರನಾಥ ರೈ, ಧನಲಕ್ಷ್ಮೀ ಗಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.