News Karnataka Kannada
Monday, May 13 2024
ಮಂಗಳೂರು

ಮಂಗಳೂರು ಮಿಲಾಗ್ರಿಸ್ ಕಾಲೇಜಿನ 2023-2024ನೇ ಸಾಲಿನ ವಾರ್ಷಿಕ ಕ್ರೀಡಾಕೂಟ

ಡಿ.6ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನ 2023 - 2024ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.
Photo Credit : News Kannada

ಮಂಗಳೂರು: ಡಿ.6ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನ 2023 – 2024ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.

ಮುಖ್ಯ ಅತಿಥಿಯಾಗಿ ಮಿಲಾಗ್ರಿಸ್ ಕಾಲೇಜಿನ ಹಿತೈಷಿಯಾಗಿರುವ ಯುಲಾ ಪಿಂಟೋ ತಮ್ಮ ಭಾಷಣದಲ್ಲಿ “ಪ್ರತಿಯೊಂದು ಕಾರ್ಯದಲ್ಲಿಯೂ ಕೂಡಾ ಯಶಸ್ಸು ದೊರೆಯಲು ಪ್ರಯತ್ನ ಮುಖ್ಯವಾಗಿದೆ. ಕ್ರೀಡಾ ಸಾಧನೆಯಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬಹುಮಾನ ಗೆಲ್ಲಲು ಸಾಧ್ಯವಾಗುವುದು ಎಂದು ತಿಳಿಹೇಳಿದರು.

ಮಿಲಾಗ್ರಿಸ್ ಕಾಲೇಜಿನ ಸಂಚಾಲಕರಾದ  ಬೊನವೆಂಚರ್ ನಜರೆತ್ ಅವರು ಕ್ರೀಡಾ ಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಗೌರವಾನ್ವಿತ ಅತಿಥಿಯಾಗಿ ಅಂತರಾಷ್ಟ್ರೀಯ ಕಬಡ್ಡಿ ರೆಫರಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೇಮನಾಥ್ ಉಳ್ಳಾಲ್, ಶಿಕ್ಷಕ ಸಮಿತಿಯ ಅಧ್ಯಕ್ಷರಾದ ಪ್ಯಾಟ್ಸಿ ವಾಸ್, ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ವಂದ ಗುರು. ಉದಯ ಫೆರ್ನಾಂಡಿಸ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೆಲ್ವಿನ್ ವಾಸ್, ಉಪಸ್ಥಿತರಿದ್ದರು.

ಸಮಾರೋಪದಲ್ಲಿ ಮಿಲಾಗ್ರಿಸ್ ಚರ್ಚ್ ಪಾಲನಾ ಸಮಿತಿ ಕಾರ್ಯದರ್ಶಿ ಜೆಸಿಂತಾ ಫೆರ್ನಾಂಡಿಸ್, ಮುಖ್ಯ ಅತಿಥಿಯಾಗಿದ್ದರು ಸುಮಾರು 602 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು. ಪ್ರಾಂಶುಪಾಲರಾದ ಮೈಕಲ್ ಸಾಂತೂಮಾಯೋರ್ ಸ್ವಾಗತಿಸಿದರು, ವಾಣಿಜ್ಯ ವಿಭಾಗದ ಮುಖ್ಯ ಸ್ಥರಾದ ಗ್ಲಾನ್ಸಿ ಯ
ಫೆರ್ನಾಂಡಿಸ್ ಹಾಗೂ ಉಪನ್ಯಾಸಕಿ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕರು ಹಾಗೂ ದೈಹಿಕ ಶಿಕ್ಷಕರಾದ ಆಕಾಶ ಶೆಟ್ಟಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು