ಮಂಗಳೂರು

ಮಂಗಳೂರು ವಿವಿ ಕುಲಪತಿಯಾಗಿ ಪಿ.ಎಲ್‌. ಧರ್ಮ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ವಿವಿ ಕುಲಪತಿಗಳಾಗಿ ಪ್ರೊ.ಪಿ.ಎಲ್. ಧರ್ಮ ಅವರನ್ನು ನೇಮಕ ಮಾಡಿ ರಾಜ್ಯಪಾಲರೂ, ಮಂಗಳೂರು ವಿವಿ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈ ಮೂಲಕ‌ ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಪ್ರೊ.ಪಿ.ಎಲ್. ಧರ್ಮ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಮಂಗಳೂರು ವಿವಿಯಲ್ಲಿ ಕುಲಸಚಿವ (ಮೌಲ್ಯಮಾಪನ)ರಾಗಿ ಕರ್ತವ್ಯ ನಿರ್ವಹಿಸಿದ್ದರು.

ಮುಂದಿನ ನಾಲ್ಕು ವರ್ಷಗಳ ಅವಧಿಯವರೆಗೆ ಅಥವಾ ಪ್ರೊ.ಪಿ.ಎಲ್. ಧರ್ಮ ಅವರಿಗೆ 67ವರ್ಷ ತುಂಬುವವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅವರು ಮಂಗಳೂರು ವಿವಿ ಕುಲಪತಿಗಳಾಗಿ ಮುಂದುವರಿಯಲಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈ ಹಿಂದಿನ ಕುಲಪತಿಗಳಾಗಿದ್ದ ಪಿ‌.ಎಸ್.ಯಡಪಡಿತ್ತಾಯರ ಅಧಿಕಾರ ಅವಧಿ 2023ರ ಜೂನ್ 3ರಂದಿಗೆ ಮುಗಿದಿತ್ತು‌. ಆ ಬಳಿಕ ಮಂಗಳೂರು ವಿವಿಯ ಅತ್ಯಂತ ಹಿರಿಯ ಡೀನ್ ಆಗಿದ್ದ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಜಯರಾಜ್ ಅಮೀನ್ ಅವರನ್ನು ಹಂಗಾಮಿ ಕುಲಪತಿಗಳಾನ್ನಾಗಿ ನೇಮಕ ಮಾಡಲಾಗಿತ್ತು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago