News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಬೋಸ್ಕೊಸ್ ಪದವಿಪೂರ್ವ ಕಾಲೇಜಿಗೆ ಶೇಕಡಾ 99.47 ಫಲಿತಾಂಶ

Mangaluru: 99.47 per cent result for Boscos PU College
Photo Credit : News Kannada

ಮಂಗಳೂರು: ಮಾರ್ಚ್ 2023 ರಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ದೇರೆಬೈಲ್ ಕೊಂಚಾಡಿಯಲ್ಲಿರುವ ಬೋಸ್ಕೋಸ್ ಪದವಿಪೂರ್ವ ಕಾಲೇಜು ಶೇಕಡಾ 99.47% ಫಲಿತಾಂಶ ಗಳಿಸಿದೆ.

ವಿಜ್ಞಾನ ವಿಭಾಗದಲ್ಲಿ ಕರ್ನಾಟಕ ರಾಜ್ಯದಲ್ಲೇ ಚತುರ್ಥ ಸ್ಥಾನ ಹಾಗೂ ಮಂಗಳೂರು ನಗರದಲ್ಲಿ ಪ್ರಥಮ ಸ್ಥಾನ ಗಳಿಸಿರುವ ವಿದ್ಯಾರ್ಥಿ ಅಖಿಲ್ ಮೆನನ್ 593 ಅಂಕ ಗಳಿಸಿರುತ್ತಾರೆ. ಧೃತಿ 590 ಅಂಕ ಗಳಿಸಿದರೆ, ವಾಣಿಜ್ಯ ವಿಭಾಗದ ಪ್ರಜ್ವಲ್ ಎಂ ಎಸ್ 578 ಅಂಕಗಳನ್ನು ಗಳಿಸಿರುತ್ತಾರೆ.

ವಿಜ್ಞಾನ ವಿಭಾಗದ ಪರೀಕ್ಷೆಗೆ ಹಾಜರಾದ ಒಟ್ಟು 160 ವಿದ್ಯಾರ್ಥಿಗಳಲ್ಲಿ 94 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ ಹಾಗೂ 58 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 1 ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ.

ವಾಣಿಜ್ಯ ವಿಭಾಗವು 100 ಶೇಕಡಾ ಫಲಿತಾಂಶ ಗಳಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 13 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ , 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಅತ್ಯುತ್ತಮ ಅಂಕ ಗಳಿಸಿ ಉತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಪ್ರೊ ಎಸ್. ಎಸ್ ಬೋಸ್ಕೊ, ಆಡಳಿತ ಮಂಡಳಿ ಸದಸ್ಯೆ ಎಜಿತಿನ್ ಬೋಸ್ಕೊ, ಪ್ರಾಂಶುಪಾಲರಾದ ಡಾ. ವಿಜಯ ಕುಮಾರಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಶುಭಹಾರೈಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು