ಮಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋದ ಬೈಕ್ ಸವಾರ ಮೃತಪಟ್ಟ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ. ನಗರದ ಬಿರ್ಕನಕಟ್ಟೆ ಇನ್ಫೆಂಟ್ ಜೀಸಸ್ ಚರ್ಚ್ ದ್ವಾರದ ಬಳಿ ಜುಲೈ 30ರ ತಡರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋದ ಸಂದರ್ಭದಲ್ಲಿ ಬೈಕ್ ವೊಂದು ಓಮ್ನಿ ವ್ಯಾನ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ. ಅಂಕಿತ್ ಜಿ ಮೃತಪಟ್ಟ ಯುವಕ. ಅಂಕಿತ್ ತನ್ನ ಸ್ನೇಹಿತನನ್ನು ಕುಲಶೇಖರ್ಗೆ ಬಿಟ್ಟು ಮನೆಗೆ ಹೋಗುತ್ತಿದ್ದ ವೇಳೆ ಬಿಕ ರ್ನಕಟ್ಟೆಯ ಇನ್ಫೆಂಟ್ ಜೀಸಸ್ ಚರ್ಚ್ನ ಮುಖ್ಯ ದ್ವಾರ ತಲುಪುತ್ತಿದ್ದಂತೆ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಯತ್ನಿಸಿದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ನಿಂತಿದ್ದ ಓಮ್ನಿ ವ್ಯಾನ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಅಂಕಿತ್ ಚರಂಡಿಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ.
ಮಂಗಳೂರು: ರಸ್ತೆ ಹೊಂಡ ತಪ್ಪಿಸಲು ಹೋದ ಬೈಕ್ ಸವಾರ ಸಾವು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.