News Karnataka Kannada
Tuesday, April 23 2024
Cricket
ಮಂಗಳೂರು

ಮಂಗಳೂರು: ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಗೆ ಬೆಂಕಿ ಇರಿಸಿದ ವ್ಯಕ್ತಿ

Mangaluru: A man set fire to the temple of Koragajjana, the causal deity of Tulunadu
Photo Credit : News Kannada

ಮಂಗಳೂರು: ಭೂಮಿ ವಿಚಾರದಲ್ಲಿ ವಿವಾದದಿಂದ ಕೊರಗಜ್ಜ ಗುಡಿಗೆ ಬೆಂಕಿ ಇಟ್ಟ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರಿನಲ್ಲಿ ನಡೆದಿದೆ. ಕೊರಗಜ್ಜನ ದೈವ ಸಾನಿಧ್ಯದಲ್ಲಿ ಭೂಮಿ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದು, ಇದೇ ಕಾರಣದಿಂದ ಕೊರಗಜ್ಜನ ಗುಡಿಗೇ ಸ್ಥಳೀಯ ವ್ಯಕ್ತಿಯೊಬ್ಬ ಬೆಂಕಿ ಇರಿಸಿದ್ದಾನೆ.

ಬಾಡಾರು ಕೊರಗನ ಕಲ್ಲು ಎಂಬಲ್ಲಿ ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಕಳೆದ ಕೆಲ ವರ್ಷಗಳಿಂದ ಈ ಸಂಬಂಧ ಸಮಿತಿ ಮತ್ತು ಖಾಸಗಿ ವ್ಯಕ್ತಿ ನಡುವೆ ತಗಾದೆ ಏರ್ಪಟ್ಟಿತ್ತು. ಈಗ ಸ್ಥಳೀಯ ವ್ಯಕ್ತಿ ಕೊರಗಜ್ಜನ ಗುಡಿಗೇ ಬೆಂಕಿ ಹಾಕಿದ್ದಾರೆ. ಘಟನೆ ಖಂಡಿಸಿ ಸಮಿತಿಯವರು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು