ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ರಸ್ತೆ ದಾಟುತ್ತಿದ್ದ ಮಧ್ಯವಯಸ್ಕ ವ್ಯಕ್ತಿಗೆ ಟ್ರಕ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೂಲಗಳ ಪ್ರಕಾರ, 45 ವರ್ಷದ ಆಕಾಶಭವನದ ನಿವಾಸಿ ಅಶೋಕ್ ಮೇಲೆ ಟ್ರಕ್ ಹರಿದಿದೆ.
ಅಶೋಕ್ ತನ್ನ ದ್ವಿಚಕ್ರ ವಾಹನವನ್ನು ನಿಲ್ಲಿಸಿ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.