Categories: ಮಂಗಳೂರು

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ  ಡಿಸೆಂಬರ್ ೪ ರಂದು ಭಾನುವಾರ ಸಂಜೆ ೪ ಗಂಟೆಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಚಲನ ಚಿತ್ರ ನಿರ್ದೇಶಕ, ನಟ ರಿಷಬ್ ಶೆಟ್ಟಿ ಮತ್ತು  ಕಾಂತಾರ ಚಿತ್ರ ತಂಡ ಭಾಗವಹಿಸಲಿದೆ. ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮವನ್ನು ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಲಕ್ಷ್ಮೀ ನಾರಾಯಣ ಅಸ್ರಣ್ಣ ಆಶೀರ್ವಚನ ನೀಡಲಿದ್ದಾರೆ. ಸಮಾರಂಭದಲ್ಲಿ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ  ಶಿಕ್ಷಣ, ಮದುವೆ, ಮನೆ ನಿರ್ಮಾಣ, ಕ್ರೀಡೆ, ವೈದ್ಯಕೀಯ ಮೊದಲಾದ  ಫಲಾನುಭವಿಗಳಿಗೆ  ಚೆಕ್ ಗಳನ್ನು ವಿತರಿಸಲಾಗುವುದು.

ಸಮಾರಂಭದಲ್ಲಿ ಒಕ್ಕೂಟದ ನಿರ್ದೇಶಕರಾದ ತೋನ್ಸೆ ಆನಂದ ಶೆಟ್ಟಿ, ಕೆ. ಪ್ರಕಾಶ್ ಶೆಟ್ಟಿ, ಶಶಿಧರ ಬಿ ಶೆಟ್ಟಿ ಬರೋಡ,  ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ,  ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ,  ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ, ಜತೆ ಕಾರ್ಯದರ್ಶಿ ಪ್ರವೀಣ್ ಭೋಜಶೆಟ್ಟಿ, ಸಿ. ಎ. ಸದಾಶಿವ ಶೆಟ್ಟಿ, ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್  ಉಪಸ್ಥಿತರಿರುವರು. ಸಭೆಯಲ್ಲಿ ಒಕ್ಕೂಟದ ನಿರ್ದೇಶಕರು, ಮಹಾ ಪೋಷಕರು, ಪೋಷಕರು,  ಪಟ್ಲ ಫೌಂಡೇಶನ್ ಟ್ರಸ್ಟ್ ನ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ವಲಯ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಸಂಜೆ ೩.೩೦ ಕ್ಕೆ ಭಜನಾ ಸಂಕೀರ್ತನೆ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಪಾವಂಜೆ ಮೇಳದಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ. ಸಾರ್ವಜನಿಕರಿಗೆ ಅನ್ನಸಂತರ್ಪಣೆಯೂ ನಡೆಯಲಿದೆ.

Ashika S

Recent Posts

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

6 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

23 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

34 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

48 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago