Categories: ಮಂಗಳೂರು

ಮಂಗಳೂರು: ಫಾಕ್ಟರಿಯಲ್ಲಿ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿಗಳನ್ನು ಕಳವು ಮಾಡಿದ ಆರೋಪಿಗಳ ಸೆರೆ

ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈವೇಟ್ ಲಿಮಿಟೆಡ್ ಕಂಪೆನಿಗೆ ಗುಜರಾತ್ ನಿಂದ ಬರುತ್ತಿದ್ದ ಕೋಟ್ಯಾಂತರ ಪ್ಲಾಸ್ಟಿಕ್ ಕಚ್ಛಾ ಸಾಮಾಗ್ರಿಗಳನ್ನು ಕಳವು ಮಾಡಿ ಮಾರಾಟ ಮಾಡಿ ಕಂಪೆನಿಗೆ ಮೋಸ ಮಾಡಿದ ಕಂಪೆನಿಯ ನೌಕರ ಹಾಗೂ ಇತರ ಮೂರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಪಣಂಬೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿ ಪ್ರಕರಣವನ್ನು ಭೇದಿಸಿರುತ್ತಾರೆ.

ಪ್ರಕರಣದ ವಿವರ

ಬೈಕಂಪಾಡಿಯ ಬ್ರೈಟ್ ಪ್ಯಾಕೆಜಿಂಗ್ ಪ್ರೈ.ಲಿ. ಎಂಬ ಕಂಪೆನಿಯಲ್ಲಿ ಪಾಲಿಪ್ರೊಪಿಲೀನ್ ನೇಯ್ದ ಚೀಲಗಳು ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಇದಕ್ಕೆ ಬೇಕಾದ ಪಾಲಿಪ್ರೊಪಿಲೀನ್ ಕಚ್ಚಾ ಸರಕುಗಳನ್ನು ಕಂಪನಿಗೆ ತರಿಸುತ್ತಿದ್ದು, ಕಂಪನಿಗೆ ಲಾರಿಯಲ್ಲಿ ಬರುತ್ತಿದ್ದ ಪಾಲಿಪ್ರೊಪಿಲೀನ್ ಕಚ್ಚಾ ಸರಕುಗಳನ್ನು ಕಂಪನಿಯಲ್ಲಿ ಸ್ಟೋರ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ಕುಲಾಲ್ ಎಂಬಾತನು ಕಂಪನಿಗೆ ಬಂದ ಪಾಲಿಪ್ರೊಪಿಲೀನ್ ಕಚ್ಚಾ ಸರಕುಗಳನ್ನು ಕಂಪನಿಯಲ್ಲಿ ಸ್ವೀಕೃತಿಗೊಂಡಂತೆ ಪೋರ್ಜರಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ಕಂಪನಿಗೆ ತಿಳಿಯದಂತೆ ಇತರೊಂದಿಗೆ ಸೇರಿಕೊಂಡು 2019 ನೇ ಡಿಸೆಂಬರ್ ತಿಂಗಳಿನಿಂದ 2022 ಜನವರಿ ತಿಂಗಳ ವರೆಗೆ ಕೋಟ್ಯಾಂತರ ಮೌಲ್ಯದ 36 ಟ್ರಕ್ ಗಳಲ್ಲಿ ಬಂದ ಪಾಲಿಪ್ರೊಪಿಲೀನ್ ಕಚ್ಚಾ ಸರಕುಗಳನ್ನು ಕಂಪನಿಗೆ ತಿಳಿಯದಂತೆ ಕಳವು ಮಾಡಿದ್ದು, ಕಳವು ಮಾಡಿದ ಕಚ್ಚಾ ಸರಕುಗಳನ್ನು ಮಹೇಶ್ ಕುಲಾಲ್ ನ ಸ್ನೇಹಿತನಾದ ಅನಂತ ಸಾಗರ ಎಂಬಾತನಿಗೆ ನೀಡಿದ್ದು, ಅನಂತ ಸಾಗರನು ಈ ಕಚ್ಚಾ ಸರಕುಗಳನ್ನು ಅನಂತ ಸಾಗರ್ ಕೆಲಸ ಮಾಡುವ ಬೈಕಂಪಾಡಿಯ ವಿಧಿ ಎಂಟರ್ ಪ್ರೈಸಸ್ ನ ಹೆಸರಿನಲ್ಲಿ ನಕಲಿ ಬಿಲ್ಲುಗಳನ್ನು ಮಾಡಿ ಅದನ್ನು ಬೆಂಗಳೂರಿನ ಹೆಚ್ ಎಸ್ ಪಾಲಿಮಾರ್ ನ ಆರೋಪಿ ಕಿರಣ್ ಸಾಮಾನಿ ಎಂಬವರಿಗೆ ಮಾರಾಟ ಮಾಡಿರುತ್ತಾರೆ. ಆರೋಪಿಗಳು ಕೋಟಿ ಮೌಲ್ಯದ 36 ಲೋಡ್ ಸುಮಾರು 840 ಟನ್ ಪಾಲಿಪ್ರೊಪಿಲೀನ್ ಕಚ್ಚಾ ಸರಕುಗಳನ್ನು ಕಂಪನಿಗೆ ಗೊತ್ತಿಲ್ಲದೆ ಕಳವು ಮಾಡಿ ಅದನ್ನು ಮಾರಾಟ ಮಾಡಿರುತ್ತಾರೆ.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಪಣಂಬೂರು ಠಾಣಾ ಇನ್ಸ್ ಪೆಕ್ಟರ್ ಸೋಮಶೇಖರ ರವರ ನೇತೃತ್ವದ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಾದ

1. ಮಹೇಶ್ ಕುಲಾಲ್ @ ಮಹೇಶ್ ರಘು ಕುಲಾಲ್,(38), , ವಾಸ: ಸುಬ್ರಹ್ಮಣ್ಯ ದೇವಸ್ಥಾನದ ಬಳಿ, ಕಡಂದಲೆ ಗ್ರಾಮ, ಮಂಗಳೂರು. ಹಾಲಿ ವಾಸ: ಫ್ಲಾಟ್ ನಂಬ್ರ: 101, ಗಗನ್ ದೀಪ್ ಆಪಾರ್ಟ್ ಮೆಂಟ್, ಬಿಜೈ ಕಾಪಿಕಾಡ್, ಮಂಗಳೂರು.

2. ಅನಂತ ಸಾಗರ(39), ವಾಸ: ಓಂ ವಿಲಾಸ, ಕ್ಯಾಸಲಿನ ಕಾಲೊನಿ ರೋಡ್, ಶಕ್ತಿನಗರ, ಮಂಗಳೂರು.

3. ಸಾಯಿ ಪ್ರಸಾದ್ (35), ವಾಸ; ನಂ: 3-45, ಪಟ್ಣ ಹೌಸ್, ಕಡಂದಲೆ ಪೋಸ್ಟ್ ಮತ್ತು ಗ್ರಾಮ, ಮಂಗಳೂರು.

4. ಕಿರಣ್ ಸಮಾನಿ(53), ವಾಸ: 49, 4ನೇಕ್ರಾಸ್ ಸ್ಟ್ರೀಟ್, 1ನೇ ಮಹಡಿ, ಎಂ.ಕೆ.ಬಿ. ನಗರ, ಚೆನೈತಮಿಳುನಾಡು

ಎಂಬವರನ್ನು ದಸ್ತಗಿರಿ ಮಾಡಿ ತನಿಖೆಯನ್ನು ಕೈಗೊಳ್ಳಲಾಗಿರುತ್ತದೆ. ಆರೋಪಿ ಮಹೇಶ್ ಕುಲಾಲ್ ನು ಬ್ರೈಟ್ ಕಂಪನಿಯಿಂದ ಪಾಲಿಪ್ರೊಪಿಲೀನ್ ಕಚ್ಚಾ ಸರಕುಗಳನ್ನು ಕಳವು ಮಾಡಿ ಮಾರಾಟ ಮಾಡಿದ ಹಣದಲ್ಲಿ ಮಂಗಳೂರಿನ ವಿವಿಧ ಕಡೆಗಳಲ್ಲಿ ಜಮೀನು ಖರೀದಿ ಮಾಡಿದ್ದು, ಅಲ್ಲದೇ ಐಶಾರಾಮಿ ಕಾರುಗಳನ್ನು ಖರೀದಿ ಮಾಡಿ ಐಶಾರಾಮಿ ಜೀವನ ನಡೆಸುತ್ತಿದ್ದನು. ಅಲ್ಲದೇ ತನ್ನ ಪತ್ನಿಯ ಹೆಸರಿನಲ್ಲಿ ಬ್ಯಾಂಕ್ ನಲ್ಲಿ ಹಣ ಠೇವಣಿ ಇರಿಸಿ, ಇನ್ಸೂರೆನ್ಸ್, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುತ್ತಾನೆ. ಅಲ್ಲದೇ ಪತ್ನಿಯ ಹೆಸರಿನಲ್ಲಿ ನಗರದ 3 ಕಡೆಗಳಲ್ಲಿ ಐಷಾರಾಮಿ ಸೆಲೂನ್ ಗಳನ್ನು ಹೊಂದಿರುತ್ತಾನೆ. ಅನಂತ ಸಾಗರನು ಐಷಾರಾಮಿ ಮನೆಯನ್ನು ಕಟ್ಟಿಸಿ ಐಷಾರಾಮಿ ಕಾರನ್ನು ಖರೀದಿ ಮಾಡಿ ಐಶಾರಾಮಿ ಜೀವನ ಸಾಗಿಸುತ್ತಿದ್ದನು.

ಪ್ರಕರಣದ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿರುತ್ತಾರೆ. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ವಶದಿಂದ ಮೊಬೈಲ್ ಪೋನ್ ಗಳು -6, ಲ್ಯಾಪ್ ಟಾಪ್ ಗಳು-4, ಕಂಪ್ಯೂಟರ್-1, ಮಹೇಶ್ ಕುಲಾಲ್ ನ ಹುಂಡೈ ಕಂಪೆನಿಯ ಕಾರು-1. ರೆನಾಲ್ಡ್ ಕಾರು -1, ಅನಂತ ಸಾಗರ್ ನಿಂದ ಕಿಯಾ ಕಂಪನಿಯ ಕಾರು-1, ಟಾಟಾ ಕಂಪೆನಿಯ ಲಾರಿಯೊಂದನ್ನು ವಶಪಡಿಸಿಕೊಳ್ಳಲಾಗಿರುತ್ತದೆ.ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 74 ಲಕ್ಷ ಆಗಬಹುದು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago