Categories: ಮಂಗಳೂರು

ಮಂಗಳೂರು: ರಾಮಕೃಷ್ಣ ಮಠದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಧ್ವಜಾರೋಹಣ

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಮುಂಜಾನೆ ಏಳು ಗಂಟೆಗೆ ಧ್ವಜಾರೋಹಣವನ್ನು ರಾಮಕೃಷ್ಣ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸ್ವಾತಂತ್ರ್ಯ ಹಾಗೂ ಸ್ವಚ್ಛತೆ ಮಹಾತ್ಮಾ ಗಾಂಧೀಜಿಯವರ ಕಂಡ ಪ್ರಮುಖ ಕನಸುಗಳು. ಸ್ವಾತಂತ್ರ್ಯ ಬಂದು ಎಪ್ಪತ್ತೈದು
ಸಂವತ್ಸರಗಳು ಸಂದುರುವ ಈ ಶುಭ ಸಂದರ್ಭದಲ್ಲಿ ಸ್ವಚ್ಛತೆಯನ್ನೂ ನನಸು ಮಾಡಲು ರಾಮಕೃಷ್ಣ ಮಠ ಅಹರ್ನಿಸಿಯಾಗಿ
ಶ್ರಮಿಸುತ್ತಿರುವುದು ಶ್ಲಾಘನೀಯ. ಎಲ್ಲರೂ ಈ ಕಾರ್ಯದಲ್ಲಿ ಕೈಜೋಡಿಸಿದಾಗ ಈ ಅಮೃತ ಮಹೋತ್ಸವವನ್ನು
ಆಚರಿಸುತ್ತಿರುವುದು ಅರ್ಥಪೂರ್ಣವೆನಿಸುತ್ತದೆ ಎಂದು ತಿಳಿಸಿ ಸ್ವಾತಂತ್ರೋತ್ಸವದ ಶುಭಕಾಮನೆಗಳನ್ನು ತಿಳಿಸಿದರು.

ಮುಖ್ಯ ಅಭ್ಯಾಗತರಾಗಿ ಭಾಗಿಯಾಗಿದ್ದ ಭಾರತೀಯ ಸೈನ್ಯದ ಮಾಜಿ ಯೋಧರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ
ಸ್ವಾತಂತ್ರ್ಯದ ತರುವಾಯ ಭಾರತ ವಿಜ್ಞಾನ-ತಂತ್ರಜ್ಞಾನ, ಶಿಕ್ಷಣ, ರಕ್ಷಣೆ, ಆಹಾರ ಉತ್ಪಾದನೆ ಹೀಗೆ ಅನೇಕ ಸಾಧನೆಗಳನ್ನು
ಮಾಡಿರುವುದು ಎಲ್ಲರಿಗೂ ಹೆಮ್ಮೆ ತರುವ ವಿಚಾರ. ಎಪ್ಪತ್ತೈದು ವರ್ಷಗಳ ಈ ಸ್ವಾತಂತ್ರೋತ್ಸದ ದಿನದಂದು ಮುಂದಿನ
ಇಪ್ಪತ್ತೈದು ವರ್ಷಗಳಲ್ಲಿ ಸಾಗಬೇಕಾದ ಹಾದಿಯ ಬಗ್ಗೆ ಯೋಚಿಸಬೇಕಿದೆ. ಸಣ್ಣತನ, ಅಸೂಹೆ, ದ್ವೇಷ, ಹಿಂಸೆ ಇಂತಹ ಕ್ಷುಲ್ಲಕ
ವಿಚಾರಗಳನ್ನು ಬಿಟ್ಟು ಉನ್ನತ ವಿಚಾರದತ್ತ ಸಾಗುವಂತೆ ಕರೆನೀಡಿದರು.

ಸ್ವಾಮಿ ಜಿತಕಾಮಾನಂದಜಿ ಆಶೀರ್ವಚನ ನೀಡಿ ಪ್ರತಿಯೋರ್ವ ಭಾರತೀಯ ತಮ್ಮ ಕರ್ತವ್ಯ ಹಾಗೂ ಜಾವಾಬ್ದಾರಿಗಳನ್ನು ಅರಿತು ಮುನ್ನಡೆದರೆ ನಮ್ಮ ಹಿರಿಯರು ಗಳಿಸಿಕೊಟ್ಟ ಈ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದರು.

ಇದಕ್ಕೂ ಮುನ್ನ ಶ್ರೀರಾಮಕೃಷ್ಣ ಮಿಷನ್ ಬಾಲಕಾಶ್ರಮದ ವಿದ್ಯಾರ್ಥಿಗಳು ಸ್ವಾಮಿ ಅಭಿರಾಮಾನಂದಜಿ ಜೊತೆಗೂಡಿ
ದೇಶಭಕ್ತಿಗೀತೆಗಳನ್ನು ಹಾಡಿದರು.

ಬಾಲಕಾಶ್ರಮದ ಹಳೆ ವಿದ್ಯಾರ್ಥಿಗಳು, ಶ್ರೀ ಶಾರದಾ ಮಹಿಳಾವೃಂದದರು, ಸ್ವಚ್ಛ ಮಂಗಳೂರು ಸ್ವಯಂಸೇವಕರು
ಸ್ವಾತಂತ್ರೋತ್ಸವದಲ್ಲಿ ಭಾಗಿಯಾದರು.

ಶ್ರೀ ರಂಜನ್ ಬೆಳ್ಳರಪಾಡಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸ್ವಾಮಿ ಏಕಗಮ್ಯಾನಂದಜಿ ವಂದಿಸಿದರು.

Sneha Gowda

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

25 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

26 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

45 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

49 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

54 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

1 hour ago