Categories: ಮಂಗಳೂರು

ಮಂಗಳೂರಲ್ಲಿ 22 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣ

ಮಂಗಳೂರು: ನಗರದ ಕ್ರೀಡಾಳುಗಳಿಗೆ ಪೂರಕವಾಗುವಂತೆ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣ, ಈಜುಕೊಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕೆನ್ನುವ‌ ಚಿಂತನೆಯೊಂದಿಗೆ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಇಂಟರ್ ಲಾಕ್ ಅಳವಡಿಕೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಶಾಸಕನಾದ ಪ್ರಾರಂಭದಲ್ಲಿ ನಗರದ ಏಕೈಕ ಶೆಟಲ್ ಮತ್ತು ಬ್ಯಾಡ್ಮಿಂಟನ್ ಕ್ರೀಡಾಂಗಣದ ಅವ್ಯವಸ್ಥೆಯನ್ನು ಮನಗಂಡು ಮೇಲ್ಛಾವಣಿ ದುರಸ್ತಿ, ಮೂಲಭೂತ‌ ಸೌಕರ್ಯಗಳ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.

ಉರ್ವ ಪರಿಸರದಲ್ಲಿ 22 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣದಲ್ಲಿಯೂ ಶೆಟಲ್ – ಬ್ಯಾಡ್ಮಿಂಟನ್ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಂಡು ಕ್ರೀಡಾ ಸಂಕೀರ್ಣದ ಲೋಕಾರ್ಪಣೆಯಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಪಾಲಿಕೆ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಲೀಲಾವತಿ ಪ್ರಕಾಶ್, ಮಾಜಿ ಸಚಿವರಾದ ಕೃಷ್ಣ ಜೆ ಪಾಲೆಮಾರ್, ಮುಖಂಡರಾದ ಗೋಕುಲ್ ದಾಸ್ ಭಟ್, ಮೋಹನ್ ಆಚಾರ್, ಮೋಹನ್ ಪೂಜಾರಿ, ವಸಂತ್ ಶೇಟ್, ಶ್ರೀನಿವಾಸ್ ಶೇಟ್, ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಅಧಿಕಾರಿ ರವಿ, ಬ್ಯಾಡ್ಮಿಂಟನ್ ಅಸೋಸಿಯೇಷನ್ ಪ್ರಮುಖರಾದ ಶ್ರೀನಿವಾಸ ಬಾಳಿಗಾ, ಗುರುಪ್ರಸಾದ್ ಪೈ, ಚಂದ್ರಕಾಂತ ಶೆಣೈ, ರಾಜ್ ಪತ್ರರಾವ್, ಎ ಎಸ್ ವೆಂಕಟೇಶ್, ಸುರೇಶ್ ಕುಮಾರ್, ಕುಮಾರದಾಸ್ ಶೆಣೈ, ಅಬ್ದುಲ್ ಸಮದ್, ಸುಪ್ರಿತ್ ಆಳ್ವ, ವೆಲೆರಿಯನ್ ಲೋಬೋ, ಸಂತೋಸ್ ಕುಮಾರ್ ಶೆಟ್ಟಿ, ಶೈಲೇಶ್ ಮಲ್ಯ, ವಿಶ್ವನಾಥ ಪೈ, ಗಣೇಶ್ ರಾವ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

Sneha Gowda

Recent Posts

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

4 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

5 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

32 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

41 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

44 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

55 mins ago