ಮಂಗಳೂರು: ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ 2022-23ನೇ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ವೆಬ್ಸೈಟ್ ವಿಳಾಸ www.twkar.nic.in ಮೂಲಕ ಇದೇ ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 0824-2450114 ಸಂಪರ್ಕಿಸುವಂತೆ ಸಮಗ್ರ ಹಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.