News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

Mangaluru: Applications invited for scholarships for children of ex-servicemen
Photo Credit : Wikimedia

ಮಂಗಳೂರು: 2022-23ನೇ ಶೈಕ್ಷಣಿಕ ಸಾಲಿಗಾಗಿ ಕರ್ನಾಟಕ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ನಗರದ ಉರ್ವಸ್ಟೋರ್‍ನಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯವನ್ನು ಸಂಪರ್ಕಿಸಿ.

ಅಕ್ಟೋಬರ್ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ನವೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು