Categories: ಮಂಗಳೂರು

ಮಂಗಳೂರು: ಪುತ್ತೂರಿನಲ್ಲಿ “ಅರುಣ” ಬಂಡಾಯ, ಭಿನ್ನಮತ ಶಮನಕ್ಕೆ ಸಂತೋಷ್‌ ಎಂಟ್ರಿ

ಮಂಗಳೂರು: ವಿಧಾನಸಭೆ ಚುನಾವಣೆಗೆ ಪುತ್ತೂರು ಬಿಜೆಪಿಯಲ್ಲಿ ಟಿಕೆಟ್‌ ಘೋಷಣೆಯಾದ ಬಳಿಕ ಬಂಡಾಯ ಚಟುವಟಿಕೆ ಬಿರುಸು ಪಡೆದಿದೆ. ಅದರಲ್ಲಿಯೂ ಅರುಣ್‌ ಕುಮಾರ್‌ ಪುತ್ತಿಲ ಅವರ ಸಭೆ ಬಳಿಕ ಕಾರ್ಯಕರ್ತರ ವಲಯದಲ್ಲಿ ಅಸಮಾಧಾನ ಹೆಚ್ಚಿದೆ.

ಆರ್‌ಎಸ್‌ಎಸ್‌ ಮುಖಂಡರು ಮೌನಕ್ಕೆ ಶರಣಾಗಿರುವ ಬಿಜೆಪಿ ಮುಖಂಡರನ್ನು ಸಮಾಧಾನ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ಈ ಕೆಲಸ ಯಾವುದೇ ಫಲ ನೀಡಿದಂತಿಲ್ಲ. ಬಿಜೆಪಿ ಮುಖಂಡರು ಪ್ರತಿ ಬೂತ್‌ಗಳಿಗೆ ತೆರಳಿ ಅಭ್ಯರ್ಥಿ ಪರ ಕೆಲಸ ಮಾಡುವಂತೆ ಕೋರಿಕೊಳ್ಳುತ್ತಿದ್ದಾರೆ.  ಇತ್ತ ಅರುಣ್‌ ಕುಮಾರ್‌ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್‌ 17ರಂದು ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಸಂತೋಷ್‌ ಭೇಟಿ ಸಿಹಿ ತರುವುದೇ: ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳ ಪ್ರಯೋಗಶಾಲೆಯಂತಿರುವ ಪುತ್ತೂರಿನಲ್ಲಿ ಅಭ್ಯರ್ಥಿ ಆಯ್ಕೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಏ.20ರ ಮೊದಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಬರುವ ನಿರೀಕ್ಷೆಯಿದೆ. ಅಲ್ಲದೆ ಪುತ್ತಿಲ ಫಾರ್‌ ಪುತ್ತೂರು ಅಭಿಯಾನ ಮುಖ್ಯಸ್ಥರನ್ನು ಭೇಟಿಯಾಗುವ ನಿರೀಕ್ಷೆಯಿದೆ.

Ashika S

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 mins ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

36 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

53 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago