Categories: ಮಂಗಳೂರು

ಮಂಗಳೂರು: ಬಸವರಾಜ ಬೊಮ್ಮಾಯಿಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮನವಿ

ಮಂಗಳೂರು: ಬಂಟ ಸಮುದಾಯದ ಅತೀ ಪ್ರಾಮುಖ್ಯ ಬೇಡಿಕೆಯಾದ ಬಂಟ  ಸಮಾಜವನ್ನು ಪ್ರವರ್ಗ ೨ ಎ ಯಲ್ಲಿ ಸೇರ್ಪಡೆ ಸಹಿತ ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರ್ಮಿಸುವ ನೂತನ ಕಟ್ಟಡಕ್ಕೆ  ಅನುದಾನ ಹಾಗೂ ಸಮಾಜಕ್ಕೆ ಸವಲತ್ತುಗಳನ್ನು ನೀಡುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ   ನಳಿನ್ ಕುಮಾರ್ ಕಟೀಲ್ ರವರ ಮುಂದಾಳತ್ವದಲ್ಲಿ  ಒಕ್ಕೂಟದ ಮಹಾದಾನಿಗಳಾದ  ಕನ್ಯಾನ ಸದಾಶಿವ ಶೆಟ್ಟಿ,   ಮಹಾನಿರ್ದೇಶಕ ತೋನ್ಸೆ ಆನಂದ ಶೆಟ್ಟಿ,  ಒಕ್ಕೂಟದ ನಿರ್ದೇಶಕ  ಶಶಿಧರ ಶೆಟ್ಟಿ ಬರೋಡ, ಒಕ್ಕೂಟದ ಉಪಾಧ್ಯಕ್ಷ   ಕರ್ನಿರೆ ವಿಶ್ವನಾಥ ಶೆಟ್ಟಿ, ಕೊಲ್ಲಾಡಿ ಬಾಲಕೃಷ್ಣ ರೈ  ಇವರನ್ನು ಒಳಗೊಂಡ ನಿಯೋಗವು  ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿದೆ.

ಮೀಸಲಾತಿಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಕ್ಕೂಟದ ಪದಾಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿದರು.  ಒಕ್ಕೂಟದ ಬೇಡಿಕೆಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸಕರಾತ್ಮಕವಾಗಿ ಸ್ಪಂದನೆ ನೀಡಿ, ಸರಕಾರದಿಂದ  ಬೇಡಿಕೆಯನ್ನು ಆದಷ್ಟು ಬೇಗ ಈಡೇರಿಸುವ ಭರವಸೆಯನ್ನು ನೀಡಿದರು.

Ashika S

Recent Posts

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

10 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

19 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

22 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

37 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

38 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

43 mins ago