Categories: ಮಂಗಳೂರು

ಮಂಗಳೂರು: ಆಟೋ ರಿಕ್ಷಾದಲ್ಲಿ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ

ಮಂಗಳೂರು: ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡು. ಎನ್ನುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿ. ಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದ ಬೆಳಕು ಮೂಡಿದೆ.

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದ ಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು.

ಈ ವೇಳೆ ಮನೆಯನ್ನು ನವೀಕರಿಸುವ ಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆ ಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತು ಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22ರ ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರ ನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ. ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು.

Ashika S

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

9 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

10 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

31 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

42 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

44 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

55 mins ago