Categories: ಮಂಗಳೂರು

ಮಂಗಳೂರು ಆಟೋ ರಿಕ್ಷಾ ಸ್ಫೋಟ: ಆರೋಪಿ ಗುಣಮುಖನಾದ ಬಳಿಕ ಕಸ್ಟಡಿಗೆ ಪಡೆದು ವಿಚಾರಣೆ

ಮಂಗಳೂರು, ನ.21: ಆಟೋ ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಪ್ರಯಾಣಿಕನ ಗುರುತನ್ನು ಎಡಿಜಿಪಿ ಅಲೋಕ್ ಕುಮಾರ್ ದೃಢಪಡಿಸಿದ್ದು, ಈತ ಮಂಗಳೂರಿನ ಗೋಡೆ ಬರಹ ಮತ್ತು ಶಿವಮೊಗ್ಗದಲ್ಲಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿ ಶಾರೀಕ್ ಎಂದು ಹೇಳಿದ್ದಾರೆ.

ಶಾರಿಕ್​ ಸಂಬಂಧಿಕರು ಬಂದು ಗುರುತು ಪತ್ತೆ ಹಚ್ಚಿದ್ದಾರೆ. ಈತ ಮೋಹನ್​ ಕುಮಾರ್​ ಎಂಬುವರ ಮನೆಯಲ್ಲಿ ವಾಸವಿದ್ದ. ಈತ ವಾಸವಿದ್ದ ಮನೆಯಲ್ಲಿ ಹಲವು ಸ್ಫೋಟಕ ವಸ್ತುಗಳು ಸಿಕ್ಕಿವೆ. ಈ ಆರೋಪಿಯು ಮೈಸೂರಿನಿಂದ ಮಂಗಳೂರಿಗೆ ಬಂದಿದ್ದಾನೆ. ಮತ್ತೊಂದು ಫೇಕ್ ಐಡಿ ಪಡೆದು ಕೊಯಮತ್ತೂರಲ್ಲೂ ವಾಸವಿದ್ದ ಎಂದು ಸುದ್ದಿಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ತೀರ್ಥಹಳ್ಳಿ ಮೂಲದ ಅರಾಫತ್ ಅಲಿ, ಅಬ್ದುಲ್ ಮತೀನ್ ಜೊತೆಗೆ ಶಾರೀಕ್ ಸಂಪರ್ಕ ಹೊಂದಿದ್ದ, ಸದ್ಯ ಅರಾಫತ್ ಮತ್ತು ಅಬ್ದುಲ್ ಮತೀನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇವರು ಐಸಿಸ್ ನೆಟ್ವರ್ಕ್ ಹೊಂದಿರುವವರಾಗಿದ್ದು ಇವರ ಪ್ರೇರಣೆಯಿಂದ ಕೃತ್ಯ ಸಾಧ್ಯತೆ ಇದೆ ಎಂದು ಹೇಳಿದರು.

ಆರೋಪಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಶಾರೀಕ್ ಕೊಯಮತ್ತೂರು, ತಮಿಳುನಾಡು, ಕೇರಳ ಎಲ್ಲಾ ಸುತ್ತಾಡಿ ಮೈಸೂರು ಬಂದಿದ್ದ. ಅಲ್ಲಿ ರೂಂ ಮಾಡಿ ಮೊಬೈಲ್ ತಯಾರಿ ಇನ್ಸ್ಟಿಟ್ಯೂಟ್ ನಲ್ಲಿ ಕೆಲಸ ಮಾಡ್ತಿದ್ದ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆ.

ಫಂಡಿಂಗ್ ಮಾಡುತ್ತಿದ್ದವರ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದೇವೆ. ಸುಟ್ಟ ಗಾಯಗೊಂಡಿರುವ ಆರೋಪಿ ಗುಣಮುಖನಾದ ನಂತರ ಆತನನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ಮಾಡಲಾಗುವುದು. ಈ ಪ್ರಕರಣದ ತನಿಖೆಗೆ ಎಸಿಪಿ ಪರಮೇಶ್ವರ ಹೆಗಡೆಯವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

6 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

7 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

7 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago