ಮಂಗಳೂರು: ಕಂಕನಾಡಿಯ ನಾಗುರಿ ಸ್ಕೂಟರ್ ಶೋ ರೂಮ್ ವೊಂದು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ (ಜೂ24) ನಡೆದಿದೆ.
ಒಕಿನವ ಬ್ಯಾಟರಿ ಸ್ಕೂಟರ್ ಶೋ ರೂಮ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹಲವು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟ ನಡೆದಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಸ್ಕೂಟರ್ ಶೋ ರೂಮ್ ಮೇಲ್ಗಡೆ ಮನೆ ಇದ್ದು, ಹಮೀದ್ ಎಂಬವರಿಗೆ ಸೇರಿದೆ ಎಂದು ತಿಳಿದು ಬಂದಿದೆ. ಘಟನೆ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.