News Karnataka Kannada
Monday, April 29 2024
ಮಂಗಳೂರು

ಬಿಜೆಪಿ ಪಟ್ಟಿ ಪ್ರಕಟ: ಪುತ್ತೂರಿಗೆ ಆಶಾ ತಿಮ್ಮಪ್ಪ ಗೌಡ, ಸುಳ್ಯಕ್ಕೆ ಭಾಗೀರಥಿ ಮುರುಳ್ಯ 

BJP announces list: Asha Thimmappa Gowda for Puttur, Bhagirathi Murulya for Sullia 
Photo Credit : News Kannada

ಮಂಗಳೂರು: ಬಹು ನಿರೀಕ್ಷೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು ಪುತ್ತೂರಿಗೆ ಆಶಾ ತಿಮ್ಮಪ್ಪ ಗೌಡ ಹಾಗೂ ಸುಳ್ಯಕ್ಕೆ ಭಾಗೀರಥಿ ಮುರುಳ್ಯ ಅವರಿಗೆ ಟಿಕೇಟು ನೀಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೊಸದಿಲ್ಲಿಯಲ್ಲಿ ಮಂಗಳವಾರ ರಾತ್ರಿ 187 ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಪ್ರಕಟಿಸಿದ್ದು ಪುತ್ತೂರಿನ ಹಾಲಿ ಶಾಸಕ ಸಂಜೀವ ಮಠಂದೂರುಹಾಗೂ ಸುಳ್ಯ ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಈ ಬಾರಿ ಟಿಕೇಟು ನೀಡಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳಿದಂತೆ ಬಿಜೆಪಿಯ ಎಲ್ಲಾ ಹಾಲಿ ಶಾಸಕರಿಗೆ ಟಿಕೇಟು ನೀಡಲಾಗಿದ್ದು ಮೂಡುಬಿದಿರೆಯಿಂದ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರದಿಂದ ಡಾ .ಭರತ್ ಶೆಟ್ಟಿ, ಮಂಗಳೂರು ದಕ್ಷಿಣದಿಂದ ವೇದವ್ಯಾಸ ಕಾಮತ್, ಬಂಟ್ವಾಳದಿಂದ ರಾಜೇಶ್ ನಾಯ್ಕ್‌, ಬೆಳ್ತಂಗಡಿಯಿಂದ ಹರೀಶ್ ಪೂಂಜ ಅವರಿಗೆ ಟಿಕೇಟು ನೀಡಲಾಗಿದೆ. ಮಂಗಳೂರು ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಅವರಿಗೆ ಟಿಕೇಟು ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು