News Karnataka Kannada
Monday, May 06 2024
ಮಂಗಳೂರು

ಮಂಗಳೂರು: ಮನೆ ಮನೆಗೆ ತೆರಳಿ ಮತಯಾಚಿಸಿದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ ಕಾಮತ್

Mangaluru: BJP candidate D Vedavyas Kamath goes door-to-door to seek votes
Photo Credit : News Kannada

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಪ್ಪಿನಮೊಗರು, ಗೋರಿ ಗುಡ್ಡೆ, ಬಜಾಲ್, ಸೆಂಟ್ರಲ್ ವಾರ್ಡ್, ಕಟ್ಟಪುಣಿ, ವಿವೇಕ ನಗರ ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ ಕಾಮತ್ ಅವರು ಮನೆ ಮನೆಗೆ ತೆರಳಿ ಮತಯಾಚಿಸಿದರು.

ಇನ್ನೆರಡು ದಿನಗಳಲ್ಲಿ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಜವಾಬ್ದಾರಿಯಾಗಿರುವ ಮತದಾನದ ದಿನ ಬರಲಿದೆ. ಆ ದಿನ ಎಲ್ಲರೂ ಮತಗಟ್ಟೆಗೆ ಹೋಗಿ ಬಿಜೆಪಿ ಪರ ಮತ ಚಲಾಯಿಸಿ, ಸ್ಥಿರ ಸರಕಾರಕ್ಕೆ ಬೆಂಬಲ ನೀಡಬೇಕು. ಆ ಮೂಲಕ ಭವಿಷ್ಯದ ಜನಾಂಗಕ್ಕೆ ಉತ್ತಮ ನಾಡನ್ನು ಕಟ್ಟಿಕೊಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅತ್ಯಧಿಕ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು, ಹಿರಿಯ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು