Categories: ಮಂಗಳೂರು

ಮಲ್ಲಿಗೆ ನಾಡಿನ ಅಧಿಪತಿ ಯಾರು: ಕಾಂಗ್ರೆಸ್‌ಗೆ ಸೊರಕೆ, ಬಿಜೆಪಿ ಗೊಂದಲದ ಗೂಡು

ಮಂಗಳೂರು: ಶಂಕರಪುರ ಮಲ್ಲಿಗೆ ಕೃಷಿಗೆ ಹೆಸರಾದ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವರ್ಸ್‌ಸ್‌ ಕಾಂಗ್ರೆಸ್‌ ನೇರ ಹಣಾಹಣಿ ಇದೆ. 2013ರ ಚುನಾವಣೆಯಲ್ಲಿ ಬಿಜೆಪಿಯು ಲಾಲಾಜಿ ಮೆಂಡನ್ ವಿರುದ್ಧ ಕಾಂಗ್ರೆಸ್‌ನ ವಿನಯ್‌ ಕುಮಾರ್ ಸೊರಕೆ 1,855 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರೆ, 2018ರಲ್ಲಿ ವಿನಯ ಕುಮಾರ್ ಸೊರಕೆ ವಿರುದ್ಧ ಲಾಲಾಜಿ ಆರ್.‌ ಮೆಂಡನ್ 11,917 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಆಂತರಿಕ ಸಮೀಕ್ಷೆ ಆತಂಕ ನಡುವೆ ಗುರ್ಮೆ ಸುರೇಶ್‌ ಶೆಟ್ಟಿ, ಯಶಪಾಲ್‌ ಲಾಬಿ: ಹಾಲಿ ಶಾಸಕ ಲಾಲಾಜಿ ಮೆಂಡನ್‌ ಅಭಿವೃದ್ಧಿ ಕಾರ್ಯದ ಹೊರತಾಗಿಯೂ ಬಿಜೆಪಿ ಆಂತರಿಕ ಸರ್ವೆಯಲ್ಲಿ ಕೆಲ ನಕಾರಾತ್ಮಕ ಅಂಶಗಳು ಇರುವುದು ಸತ್ಯ. ಈ ಬಗ್ಗೆ ಪಕ್ಷದ ವರಿಷ್ಠರು ಚಿಂತೆಗೀಡಾಗಿದ್ದು, ಸುಳ್ಯ, ಪುತ್ತೂರು ಸೇರಿದಂತೆ ಕರಾವಳಿಯ ಕೆಲಕ್ಷೇತ್ರಗಳಂತೆ ಇಲ್ಲಿಯೂ ಹೊಸ ಅಭ್ಯರ್ಥಿಗೆ ಮಣೆ ಹಾಕುವ ಚಿಂತನೆಯೂ ಇದೆ. ಹಾಲಿ ಶಾಸಕ ಲಾಲಾಜಿ ಆರ್.‌ ಮೆಂಡನ್‌ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿರುವುದು ಇಬ್ಬರು ಪ್ರಮುಖ ನಾಯಕರು, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಗುರ್ಮೆ ಸುರೇಶ್‌ ಶೆಟ್ಟಿ ಮತ್ತು ಬಿಜೆಪಿ ಹಿಂದುಳಿದ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ. ಪ್ರಖರ ಹಿಂದು ಮುಖಂಡನಾಗಿ ಹಿಜಾಬ್‌ ಹೋರಾಟ ಸಂದರ್ಭ ನೀಡಿದ ಹೇಳಿಕೆಗಳು ವೋಟ್‌ ಬ್ಯಾಂಕ್‌ ಗಟ್ಟಿಗೊಳಿಸುವಲ್ಲಿ ನೆರವಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕಾಂಗ್ರೆಸ್‌ ಒಗ್ಗಟ್ಟಿನ ಧ್ವನಿ ಸೊರಕೆ: ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್‌ ನಿಂದ ವಿನಯ್‌ ಕುಮಾರ್‌ ಸೊರಕೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸೊರೆಕೆ ಹೆಸರು ಇದೆ ಎನ್ನಲಾಗಿದೆ. ಅದೇ ರೀತಿ ವಿನಯ್‌ ಕುಮಾರ್‌ ಸೊರಕೆ ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದವರಲ್ಲ. ಅದಕ್ಕೆ ತಕ್ಕಂತೆ ಸಚಿವ ಸ್ಥಾನವೂ ದೊರೆತ ಕಾರಣ ಕಾಪು ಕ್ಷೇತ್ರದ ಅಭಿವೃದ್ಧಿಗೆ ವರವಾಗಿದ್ದು ಸುಳ್ಳಲ್ಲ. ದೊರೆತ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡಿದ್ದು, ಹಿರಿಯ ನಾಯಕರೊಂದಿಗೆ ಸಮನ್ವಯದ ಕಾರಣದಿಂದ ಅವರ ಓಟಕ್ಕೆ ವೇಗ ದೊರೆತಿದೆ. ಸೊರಕೆ ಈಗಾಗಲೇ ಪ್ರಚಾರ ಆರಂಭಿಸಿದ್ದು ಕ್ಷೇತ್ರದ ಜನರೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದಾರೆ.

Sneha Gowda

Recent Posts

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

9 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

17 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

31 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

31 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

55 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

58 mins ago