ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಅವರಿಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಭದ್ರತೆ ಹೆಚ್ಚಿಸು ವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿದೆ.
ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮಂಗಳವಾರ ರಾತ್ರಿ 9ಕ್ಕೆ ಬಿಡುಗಡೆಯಾಗಿದ್ದು, ಈ ವೇಳೆ ಕರಾವಳಿ ಮತ್ತು ಉತ್ತರ ಕರ್ನಾಟಕದ ಹಲವು ಹಿರಿಯ ನಾಯಕರಿಗೆ ಟಿಕೇಟ್ ಕೈ ತಪ್ಪಿದೆ. ಈ ಹಿನ್ನಲೆಯಲ್ಲಿ ಅವರ ಬೆಂಬಲಿಗರೂ ಕರೆ ಮಾಡಿ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ಅರುಣ್ ಕುಮಾರ್ ಪುತ್ತಿಲ, ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಬೆಂಬಲಿಗರು ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿಗಳಿವೆ. ಅಲ್ಲದೆ ಜಾಲತಾಣ ಮೂಲಕ ಕೆಲ ಮುಖಂಡರ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.