News Karnataka Kannada
Monday, April 29 2024
ಮಂಗಳೂರು

ಹಲ್ಲೆ ಪ್ರಕರಣ: ಗಂಭೀರ ಗಾಯಗೊಂಡ ಬಿಜೆಪಿ ಕಾರ್ಯಕರ್ತ ಮಂಗಳೂರು ಆಸ್ಪತ್ರೆಗೆ ದಾಖಲು

BJP worker admitted to Mangaluru hospital with serious injuries in assault case
Photo Credit : News Kannada

ಮಂಗಳೂರು: ಮಾಣಿ ಎಂಬಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ಮಹೇಂದ್ರ ಅವರನ್ನು ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಮಂಗಳೂರಿನ ಎಜೆ‌ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಭೇಟಿ ನೀಡಿದರು.

ನಳಿನ್ ಕುಮಾರ್ ಕಟೀಲ್ ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದರು. ಹಲ್ಲೆ ವಿಚಾರ ತಿಳಿದು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ರಾಜೇಶ್ ನಾಯ್ಕ್ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.

ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ದಾಳಿ ನಡೆದಿದ್ದು, ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ಹಲ್ಲೆ ನಡೆಸಲಾಗಿತ್ತು. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಹಲ್ಲೆ ನಡೆದಿತ್ತು. ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೃತ್ಯ ನಡೆಸಿತ್ತು. ಈ ಬಗ್ಗೆ ವಿಟ್ಲ ಪೋಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ದಾಖಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು