News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಬಾಂಬ್‌ ಸ್ಫೋಟ ಪ್ರಕರಣ ಶೀಘ್ರದಲ್ಲೇ ಎನ್‌ಐಗೆ ಹಸ್ತಾಂತರ- ಆರಗ ಜ್ಞಾನೇಂದ್ರ

Mangaluru: Bomb blast case to be handed over to NIA soon: Araga Jnanendra
Photo Credit : News Kannada

ಮಂಗಳೂರು: ನಾಗುರಿಯಲ್ಲಿ ನ.19ರಂದು ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಮಂಗಳೂರು ಕಮಿಷನರ್ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಟಿ ನಡೆಸಿದ್ದು ಪ್ರಕರಣವನ್ನು ಶೀಘ್ರದಲ್ಲೇ ಎನ್‌ಐಗೆ ಹಸ್ತಾಂತರಿಸುವುದಾಗಿ ತಿಳಿಸಿದರು.

“ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಡಿಜಿಪಿ ಜೊತೆ ಮಂಗಳೂರು ವಿಸಿಟ್ ಮಾಡಿದ್ದೇನೆ. ಅಲ್ಲದೇ ಆಟೋ ಚಾಲಕನ ಜೊತೆ ಆಸ್ಪತ್ರೆಗೆ ತೆರಳಿ ಮಾತನಾಡಿದ್ದೇನೆ. ಶಾರೀಕ್ ತೀರ್ಥಹಳ್ಳಿಯವನಾಗಿದ್ದು, ಬೆಂಗಳೂರು, ಕನ್ಯಾಕುಮಾರಿ ಸೇರಿ ಹಲವೆಡೆ ಸುತ್ತಾಡಿದ್ದಾನೆ, ಈ ಸಂಬಂಧ ಪೊಲೀಸರು ಅನೇಕ ಸಾಕ್ಷ್ಯ ಕಲೆ ಹಾಕಿದ್ದಾರೆ, ಫಾರೆನ್ಸಿಕ್ ತಜ್ಞರು ಕೂಡ ಅನೇಕ ದಾಖಲೆ ಕಲೆ ಹಾಕಿದ್ದಾರೆ, ಇವನ ಹಿನ್ನೆಲೆ, ಫಂಡಿಂಗ್ ಹಾಗೂ ಯಾರು ಬೆನ್ನ ಹಿಂದೆ ಇದಾರೆ ಅಂತ ತನಿಖೆ ಮಾಡಲಾಗ್ತಿದೆ ಇವನಿಗೆ ಶಿಕ್ಷೆ ಆಗೋ ನಿಟ್ಟಿನಲ್ಲಿ ಎಲ್ಲಾ ಸಾಕ್ಷ್ಯ ಸಂಗ್ರಹಿಸಲಾಗಿದೆ, ಸುಮಾರು ಎಂಟು ಜನ ತಜ್ಞ ವೈದ್ಯರು ಇಬ್ಬರಿಗೂ ಚಿಕಿತ್ಸೆ ‌ಕೊಡುತ್ತಿದ್ದಾರೆ, ಅವನು ಮಾತನಾಡಲು ಆದ ಮೇಲೆ ಮತ್ತಷ್ಟು ಮಾಹಿತಿ ಸಿಗುತ್ತೆ” ಎಂದರು.

“ಆಟೋ ಡ್ರೈವರ್ ನ ಚಿಕಿತ್ಸಾ ವೆಚ್ಚವನ್ನ ಸರ್ಕಾರವೇ ಭರಿಸುತ್ತೆ, ಉಳಿದ ಆರ್ಥಿಕ ಸಹಾಯದ ಬಗ್ಗೆ ಸಿಎಂ ಜೊತೆ ಮಾತನಾಡ್ತೇನೆ, ಸ್ಥಳೀಯವಾಗಿ ಸಿಗೋ ವಸ್ತು ಜೋಡಿಸಿ ಬಾಂಬ್ ತಯಾರಿಸೋದ್ರಲ್ಲಿ ಅವರು ಪರಿಣಿತರು. ಇದನ್ನ ಎಲ್ಲಾ ಆಯಾಮದಿಂದ ಪೊಲೀಸರು ತನಿಖೆ ಮಾಡ್ತಾರೆ, ರಕ್ತ ಹರಿಸಿ ಪ್ರಾಣ ತೆಗೆಯಲು ಹೊರಟಿರೋ ಮತಾಂಧ ಶಕ್ತಿಗಳನ್ನ ನಾವು ತಡೆಗಟ್ಟುತ್ತೇವೆ, ಕೇಂದ್ರದ ತನಿಖಾ ಸಂಸ್ಥೆಗಳು ಕೂಡ ನಮ್ಮ ಜೊತೆಗೆ ಇದ್ದಾರೆ, ಇದರ ಹಿಂದೆ ಇರೋ ಎಲ್ಲಾ ಶಕ್ತಿಗಳನ್ನ ನಾವು ಬಂಧಿಸ್ತೇವೆ, ಮಂಗಳೂರಿನಲ್ಲಿ ಎನ್.ಐ.ಎ ಕಚೇರಿ ಸ್ಥಾಪನೆ ಬಗ್ಗೆ ಹೇಳಿದ್ದೇವೆ, ಕೇಂದ್ರ ಸರ್ಕಾರ ಕೂಡ ಇದಕ್ಕೆ ಪಾಸಿಟಿವ್ ಒಪಿನಿಯನ್ ನೀಡಿದೆ” ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು