News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ನ.19ರಂದು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

Mangaluru: Bronze statue of Kedambadi Ramayya Gowda to be unveiled on Nov 19
Photo Credit : News Kannada

ಮಂಗಳೂರು: ಕ್ರಿಸ್ತ ಶಕ 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದರು.

ಅವರು ನ.15ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಯ ಲೋಕಾರ್ಪಣೆ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ನ.19ರ ಶನಿವಾರದಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯಾಗಲಿದೆ, ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕು, ಕನಿಷ್ಠ 25,000 ಜನರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿದ್ದು, ಸಂಬಂಧಿಸಿದ ಇಲಾಖೆಗಳು ಕೂಡಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವೇದಿಕೆ ಸಿದ್ದತೆ, ಊಟೋಪಚಾರ, ಕುಡಿಯುವ ನೀರು, ಶೌಚಾಲಯ, ಸಾರಿಗೆ, ಆಮಂತ್ರಣ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅವರು ಸೂಚಿಸಿದರು.

ಕೆದಂಬಾಡಿ ರಾಮಯ್ಯ ಗೌಡರ ಅಭಿಮಾನಿ ವರ್ಗ ದೊಡ್ಡದಿದೆ, ಅವರ ಹಾಗೂ ಅಮರ ಸುಳ್ಯ ಸಮರದ ಬಗ್ಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಯಕ್ಷ ರಂಗಾಯಣದಿಂದ ರಾಜ್ಯಾದ್ಯಂತ ನಾಟಕ ಪ್ರದರ್ಶನಗಳನ್ನು ಮಾಡಲಾಗಿದೆ ಎಂದರು.

ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯಗೌಡರ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು