News Karnataka Kannada
Monday, May 06 2024
ಮಂಗಳೂರು

ಮಂಗಳೂರು: ಶಾಲಾ ವಿದ್ಯಾರ್ಥಿಗೆ ಥಳಿಸಿದ ಬುರ್ಖಾಧಾರಿ ಮಹಿಳೆ ಮತ್ತು ಯುವಕ

Mangaluru: Burqa-clad woman and youth thrash school student
Photo Credit : News Kannada

ಮಂಗಳೂರು: ಅಪ್ರಾಪ್ತ ಶಾಲಾ ಬಾಲಕನ ಮೇಲೆ ಬಸ್ ನಿಲ್ದಾಣದಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಬುರ್ಖಾಧಾರಿ ಮಹಿಳೆ ಹಾಗೂ ಯುವಕನೋರ್ವ ಮನಬಂದಂತೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡುತ್ತಿರುವುದೇಕೆ ಎನ್ನುವುದು ಬಯಲಾಗಿಲ್ಲ.

ಪೊಲೀಸ್ ಇಲಾಖೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸದಿದ್ದಲ್ಲಿ ನೈತಿಕ ಪೊಲೀಸ್ ಗಿರಿ ನಿಯಂತ್ರಿಸುವುದು ಕಷ್ಟ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಹೊರವಲಯದ ಅಡ್ಯಾರ್ ಕಟ್ಟೆ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಮಧ್ಯವಯಸ್ಕ ಬುರ್ಖಾಧಾರಿ ಮಹಿಳೆ ಹಾಗೂ ಯುವಕ ಫಾರ್ಚುನರ್ ಕಾರ್ ನಲ್ಲಿ ಬಂದು ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.

ಯುವಕ ಸ್ಥಳೀಯವಾಗಿ ಗಾಂಜಾ ಗ್ಯಾಂಗ್ ನಲ್ಲಿ ಸಕ್ರಿಯವಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವೈರಲ್ ವಿಡಿಯೋ ಹಿನ್ನೆಲೆಯೇನು ಎನ್ನುವುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.

ಬಾಲಕ ಯಾವ ತಪ್ಪೇ ಮಾಡಿರಲಿ, ಆದರೆ ಸಾರ್ವಜನಿಕವಾಗಿ ಕಾನೂನು ಕೈಗೆತ್ತಿಕೊಳ್ಳುವುದು ತಪ್ಪು. ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಮನಕಲಕುವಂತಿದೆ. ಪೊಲೀಸರು ಆದಷ್ಟು ಬೇಗನೆ ಕಠಿಣ ಕ್ರಮ ಜರುಗಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು