Categories: ಮಂಗಳೂರು

ಮಂಗಳೂರು: ಕರಾವಳಿಗರಿಗೆ ದೊರೆಯುವುದೇ ಬಸ್‌ ಉಚಿತ ಪ್ರಯಾಣ ಗ್ಯಾರಂಟಿ

ಮಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಮುಂದಾಗಿದ್ದು, ಅದರೆ ಕರಾವಳಿ ಭಾಗದಲ್ಲಿ ಖಾಸಗಿ ಬಸ್‌ಗಳ ದರ್ಬಾರ್ ಮುಂದೆ, ಸರ್ಕಾರಿ ಬಸ್‌ಗಳು ಮಂಕಾಗಿದೆ. ಉಚಿತ ಬಸ್ ಪ್ರಯಾಣದ ಗ್ಯಾರಂಟಿ ರಾಜ್ಯದಲ್ಲಿ ಜಾರಿಗೆ ಬಂದರೂ, ಕರಾವಳಿ ಭಾಗದ ಮಹಿಳೆಯರು ಈ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ಹೆಚ್ಚಾಗಿದೆ.

ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಯೋಜನೆಗಳ ಪೈಕಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವು ಒಂದು. ಅದರೆ ಕರಾವಳಿ ಭಾಗದ ಜನರು ಈ ಸೌಲಭ್ಯದಿಂದ ವಂಚಿತರಾಗುತ್ತಾರೆಯೇ ಎಂಬ ಅನುಮಾನ ಕಾಡುತ್ತಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ೯೫ ಪರ್ಸೆಂಟ್ ಸಾರಿಗೆ ವ್ಯವಸ್ಥೆ ಇರುವುದು ಖಾಸಗಿಯದ್ದು. ಮಂಗಳೂರು ನಗರ ಮತ್ತು ಉಡುಪಿ ನಗರದಲ್ಲಂತೂ ಪೂರ್ತಿಯಾಗಿ ಖಾಸಗಿ ಬಸ್‌ಗಳೇ ಆಕ್ರಮಿಸಿಕೊಂಡಿವೆ.

ಉಳಿದಂತೆ, ಗ್ರಾಮಾಂತರ ಪ್ರದೇಶಗಳಾದ ಪುತ್ತೂರು, ಬಂಟ್ವಾಳ, ಮೂಡುಬಿದ್ರೆಯಲ್ಲೂ ಖಾಸಗಿ ಬಸ್ ಸಂಚಾರವೇ ಹೆಚ್ಚಿವೆ. ಎಲ್ಲ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ, ಕಾಲೇಜು- ಶಾಲೆಗೆ ಹೋಗುವ ಹೆಣ್ಮಕ್ಕಳಿಗೆ ಉಚಿತ ಪ್ರಯಾಣದ ಆದೇಶ ಬಂದರೆ, ಈ ಭಾಗದ ಜನರು ಅವಕಾಶ ವಂಚಿತರಾಗಲಿದ್ದಾರೆ. ದೇವರು ಕೊಟ್ಟರೂ ಪೂಜಾರಿ ಬಿಡಲ್ಲ ಎನ್ನುವ ಮಾತು ಇಲ್ಲಿ ಹೆಚ್ಚು ಅನ್ವಯವಾಗುತ್ತದೆ. ರಾಜ್ಯ ಸರಕಾರ ಜನರಿಗೆ ಉಚಿತ ಸೌಲಭ್ಯದ ಆದೇಶ ಮಾಡಿದರೂ, ಅದು ಕರಾವಳಿ ಜನರಿಗೆ ತಲುಪುವುದಿಲ್ಲ. ಈ ಕಾರಣದಿಂದ ಕರಾವಳಿಯಲ್ಲಿ ಖಾಸಗಿ ಬಸ್‌ಗಳಲ್ಲೂ ಉಚಿತ ಪ್ರಯಾಣದ ಅವಕಾಶ ನೀಡಬೇಕೆಂಬ ಒತ್ತಾಯ ಕೂಡ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಖಾಸಗಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ ಕುರಿತು ಇನ್ನು ಜಿಲ್ಲಾ ಬಸ್ ಮಾಲಕರ ಹಾಗೂ ನೌಕರರ ಸಂಘದಿಂದ ಯಾವುದೇ ನಿರ್ಧಾರ ಪ್ರಕಟಗೊಂಡಿಲ್ಲ. ಒಂದು ವೇಳೆ ಸರ್ಕಾರ ಖಾಸಗಿ ಬಸ್‌ಗಳ ಮುಂದೆ ಬೇಡಿಕೆ ಇಟ್ಟರೆ, ಸರ್ಕಾರ ಜೊತೆ ಮಾತುಕತೆ ನಡೆಸಲು ಜಿಲ್ಲಾ ಬಸ್ ಮಾಲಕರ ಹಾಗೂ ನೌಕರರ ಸಂಘ ತೀರ್ಮಾನಿಸಿದೆ. ಈಗಾಗಲೇ ಖಾಸಗಿ ಬಸ್‌ಗಳು ಸರ್ಕಾರಕ್ಕೆ ತೆರಿಗೆಯನ್ನು ಪಾವತಿ ಮಾಡುತ್ತಿವೆ. ಹಾಗಾಗಿ ಖಾಸಗಿ ಬಸ್‌ಗಳಲ್ಲಿ ಉಚಿತ ಸೌಲಭ್ಯ ನೀಡಿದರೆ, ಸರ್ಕಾರದಿಂದ ಖಾಸಗಿ ಬಸ್‌ಗಳಿಗೆ ಯಾವೆಲ್ಲ ಸವಲತ್ತು ಸಿಗುತ್ತದೆ ಎಂದು ನೋಡಿಕೊಂಡು, ಸರ್ಕಾರದೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವ ತೀರ್ಮಾನ ಮಾಡಲಾಗುವುದು ಎಂದು ಜಿಲ್ಲಾ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ ಹೇಳುತ್ತಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಮೂಲೆಗೆ ಹೋಗಬೇಕಿದ್ದರೂ, ಜನರು ಖಾಸಗಿ ಬಸ್‌ಗಳನ್ನು ಆಶ್ರಯಿಸಬೇಕು. ಒಂದೆರಡು ನರ್ಮ್ ಬಸ್ ಗಳಿದ್ದರೂ, ಊಟಕ್ಕಿಲ್ಲದ ಉಪ್ಪಿನಕಾಯಿ ಅಂತಿದೆ. ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಸಿಟಿ ಬಸ್ಸುಗಳು ತುಂಬಿಕೊಂಡೇ ಸಂಚರಿಸುವುದು ಮಾಮೂಲು. ದಿನವೂ ಕೆಲಸಕ್ಕೆ ಹೋಗುವವರು, ಶಾಲೆ, ಕಾಲೇಜಿಗೆ ಹೋಗುವವರೇ ಖಾಸಗಿ ಬಸ್ಸುಗಳ ಪ್ರಯಾಣಿಕರು.. ಇಂಥ ಸಂದರ್ಭದಲ್ಲಿ ಸಾಧಾರಣವಾಗಿ ಬಸ್ಸುಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿರುತ್ತಾರೆ. ಹೀಗಾಗಿ ರಾಜ್ಯ ಸರಕಾರದ ಸೌಲಭ್ಯ ಜಾರಿಗೆ ತರುವುದೇ ಆಗಿದ್ದರೆ, ಕರಾವಳಿಯಲ್ಲಿ ಖಾಸಗಿ ಬಸ್ಸುಗಳಿಗೂ ಅನ್ವಯಿಸಬೇಕು ಎಂದು ಮಹಿಳಾ ಪ್ರಯಾಣಿಕರು ಅಹವಾಲು ಇಟ್ಟಿದ್ದಾರೆ. ಕರಾವಳಿ ಭಾಗದಲ್ಲಿ ಬೆರಳಣಿಕೆ ಮಾತ್ರ ಸರ್ಕಾರಿ ಬಸ್‌ಗಳು ಸಂಚಾರ ಮಾಡುತ್ತಿದೆ. ಜೊತೆಗೆ ನರ್ಮ್ ಬಸ್ ಕೂಡ ಹೆಚ್ಚಾಗಿ ಸಂಚಾರ ಮಾಡದೇ ಇರುವುದರಿಂದ ಖಾಸಗಿ ಬಸ್‌ಗಳನ್ನೇ ಅವಲಂಬಿಸಬೇಕಾದ ಅನಿವಾರ್ಯವಿದೆ.

ಆಶ್ವಿನಿ ನಾಯಕ್ , ಸ್ಥಳೀಯರು

ಈಗಾಗಲೇ ಚುನಾವಣೆ ಹೊತ್ತಲ್ಲಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಲು ಹರಸಾಹಸ ಪಡುತ್ತಿರುವ ಕಾಂಗ್ರೆಸ್ ಸರಕಾರ, ಈ ನಡುವೆ, ಖಾಸಗಿ ಬಸ್ಸುಗಳ ಮೇಲೂ ಉಚಿತ ಪ್ರಯಾಣದ ಅವಕಾಶ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Ashika S

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

2 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

3 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

3 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

4 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

4 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

4 hours ago