Categories: ಮಂಗಳೂರು

ಮಂಗಳೂರು: ಕ್ಯಾನ್ಸರ್ ರೋಗ ಜನನಾಗೃತಿ ಕಾರ್ಯಕ್ರಮ

ಮಂಗಳೂರು: 4 ಫೆಬ್ರವರಿ 2023 ರಂದು ಆಚರಿಸಲಾದ ವಿಶ್ವ ಕ್ಯಾನ್ಸರ್‌ ದಿನದ ಅಂಗವಾಗಿ ದಿನಾಂಕ 9 ಫೆಬ್ರವರಿ 2023 ರಂದು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವು ಎ.ಜೆ. ಆಸ್ಪತ್ರೆಯ ಕಾನ್ಸರೆನ್ಸ್ ಹಾಲ್‌ನ್ನಲಿ ಗಂಟೆ 10ರಿಂದ 12ರ ವರೆಗೆ ನಡೆಯಲಿದೆ. “ಕ್ಲೋಸ್ ದ ಕೇರ್ ಗ್ಯಾಪ್” – ಪ್ರತಿಯೊಬ್ಬರಿಗೂ ಕ್ಯಾನ್ಸರ್ ಚಿಕಿತ್ಸೆಯನ್ನು ಕೈಗೆಟಕುವ ದರದಲ್ಲಿ ಲಭ್ಯವಿರುವಂತೆ ಮಾಡುವುದು ಈ ವರ್ಷದ ವಿಶಯವಾಗಿದೆ.

ವೈಟ್ ಡೌಸ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಕೊಡ್ರಿನ್ ಅನ್ನೋನೆಟ್ ರಸ್ಕಿನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಏ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮೆಡಿಕಲ್ ಅಸ್ಕಾಲಜಿಸ್ಟ್ ಡಾ. ರಚನ್ ಶೆಟ್ಟಿ ಹಾಗು ಯುರಾಲಜಿಸ್ಟ್ ಡಾ. ಪ್ರೀತಮ್ ಶರ್ಮ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಕ್ಯಾನ್ಸರ್ ರೋಗವು ಮುಂದಿನ ದಿನಗಳಲ್ಲಿ ಬಹುದೊಡ್ಡ ಪ್ಯಾಂಡೆಮಿಕ್ ಆಗಲಿದೆ. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ, ಅದರ ವಿರುದ್ಧ ಹೋರಾಟದ ಮಾಹಿತಿಯನ್ನು ನೀಡುವುದು ಈ ಕಾರ್ಯಕ್ರಮದ ಉದ್ದೇಶ.

ಈ ನಿಟ್ಟಿನಲ್ಲಿ ಎ.ಜೆ. ಆಸ್ಪತ್ರೆಯ ಕ್ಯಾನ್ಸರ್ ನಿಂಗ್ ಪ್ಯಾಕೇಜ್‌ನಲ್ಲಿ 30% ರಿಯಾಯಿತಿಯನ್ನು ಪರಿಚಯಿಸಲಾಗಿದೆ. ಕ್ಯಾನ್ಸರ್ ನಿಂಗ್  ಮಾಡಲಿಚ್ಚಿಸುವವರು ಈ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಅದೇ ರೀತಿ ದಿನಾಂಕ 24 ಫೆಬ್ರವರಿ 2023 ರಂದು ಆಸ್ಪತ್ರೆಯ  ಕಾನ್ಸರೆನ್ಸ್ ಹಾಲ್‌ನಲ್ಲಿ  ಕೂದಲು ದಾನ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಕೂದಲು ದಾನ ಮಾಡಲಿಚ್ಚಿಸುವವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಎಂದು ಸಂಘಟಕರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದರು

Ashika S

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

31 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

34 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

57 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago