News Karnataka Kannada
Sunday, May 05 2024
ಮಂಗಳೂರು

ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ

Mangaluru CCB arrests accused for selling MDMA
Photo Credit : News Kannada

ಮಂಗಳೂರು: ದೇರಳಕಟ್ಟೆ ಪರಿಸರದಲ್ಲಿ ಮಾದಕ ವಸ್ತು ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಒಟ್ಟು 6 ಲಕ್ಷ 41 ಸಾವಿರ ಮೌಲ್ಯದ ವಸ್ತುಗಳ ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಈಗಾಗಲೇ ಒಟ್ಟು 7 ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿವೆ.

ದ.ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಜೀಜ್ (42) ಬಂಧಿತ ಆರೋಪಿ. ಈತನಿಂದ 26 ಗ್ರಾಂ ತೂಕದ 1 ಲಕ್ಷ 30 ಸಾವಿರ ಮೌಲ್ಯದ MDMA, ಮಾದಕವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಸೇರಿ ಒಟ್ಟು 6 ಲಕ್ಷ 41 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಲಾಗಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಸಮಯದಲ್ಲಿ ಅಬ್ದುಲ್ ಅಜೀಜ್, ಕಾರಾಗೃಹ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ. ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು