News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಜ್ಯುವೆಲ್ಲರಿ, ಬ್ಯಾಂಕ್ ದರೋಡೆಕೋರರ ಗುಂಪು ಸಿಸಿಬಿ ಬಲೆಗೆ

ru: CCB nabs gang of jewellery, bank robbers
Photo Credit : News Kannada

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಯತ್ನಿಸಿದ“ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ 9 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಇದಲ್ಲದೆ ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ನ. 29-30ರ ರಾತ್ರಿ ವೇಳೆ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ “ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ ವ್ಯಕ್ತಿಗಳು ತೊಕ್ಕೊಟ್ಟಿನ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸುತ್ತಾರೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿನ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಧಿತರು ಭಾಸ್ಕರ ಬೆಳ್ಚಪಾಡ(65),ಬಂಟ್ವಾಳ, ಕನ್ಯಾನ( ಗಾಂಧಿವಾಡಿ, ಗುಜರಾತ್)ದಿನೇಶ್ ರಾವಲ್ ಅಲಿಯಾಸ್ ಸಾಗರ್ (38), ಗುಜರಾತ್. (ನೇಪಾಳ) ಮೊಹಮ್ಮದ್ ಜಾಮೀಲ್ ಶೇಖ್(29), ಸಾಹೇಬ್ ಗಂಜ್ ಜಿಲ್ಲೆ, ಜಾರ್ಖಂಡ್, ಇಂಜಮಾಮ್ ಉಲ್ ಹಕ್(27), ಜಾರ್ಖಂಡ್, ಬಿಸ್ತ ರೂಪ್ ಸಿಂಗ್ (34),ನೇಪಾಳ, ಕೃಷ್ಣ ಬಹದ್ದೂರ್ ಬೋಗಟಿ(41), ಹೈದರಾಬಾದ್,ನೇಪಾಳ, ಇಮ್ದದುಲ್ ರಝಾಕ್ ಶೇಖ್(32)ಜಾರ್ಖಂಡ್ , ಬಿವುಲ್ ಶೇಖ್(31)ಸಾಹೇಜ್ ಗಂಜ್, ಜಾರ್ಖಂಡ್ ಮತ್ತು ಇಮ್ರಾನ್ ಶೇಖ್(30), ಜಾರ್ಖಂಡ್ ಎನ್ನುವವರಾಗಿದ್ದಾರೆ.

ಜ್ಯುವೆಲ್ಲರಿ ದರೋಡೆಯನ್ನು ವಿಫಲಗೊಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆರೋಪಿಗಳೆಲ್ಲರೂ ಉತ್ತರ ಭಾರತ ಮೂಲದ ಕುಖ್ಯಾತ “ಸಾಹೇಬ್ ಗಂಜ್” ದರೋಡೆ ಗ್ಯಾಂಗ್ ನ ಸದಸ್ಯರಾಗಿದ್ದು, ಮಂಗಳೂರು ತೊಕ್ಕೊಟ್ಟಿನ ಸೂಪರ್ ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡುವ ಉದ್ದೇಶದಿಂದ ಸುಮಾರು 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದು ನಂತರ ತೊಕ್ಕೊಟ್ಟು ಬಳಿಯ ಲಾಡ್ಜ್ ವೊಂದರಲ್ಲಿ ಹಾಗೂ ತೊಕ್ಕೊಟ್ಟು ಮಂಚಿಲ ಬಳಿಯ ವ್ಯಕ್ತಿಯೊಬ್ಬರ ಮನೆಯೊಂದನ್ನು ಬಾಡಿಗೆಗೆ ಪಡೆದುಕೊಂಡು ನಂತರ ದರೋಡೆಗೆ ಸಂಚು ರೂಪಿಸಿದ್ದರು.

ದರೋಡೆಗೆ ಬೇಕಾದ ಗ್ಯಾಸ್ ಕಟ್ಟರ್, ಅಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟಿಂಗ್ ನೋಝಲ್, ಕಟ್ಟಿಂಗ್ ಹೋಸ್ ಪೈಪ್, ಲೆದರ್ ಹ್ಯಾಂಡ್ ಗ್ಲೌಸ್, ಕಬ್ಬಿಣದ ರಾಡ್, ತಲವಾರು, ಅಕ್ಸೋ ಬ್ಲೇಡ್, ಹ್ಯಾಮರ್, ಸ್ಕ್ರೂಡ್ರೈವರ್, ಮೆಣಸಿನ ಹುಡಿ, ನೈಲಾನ್ ಹಗ್ಗ ಹಾಗೂ ಇತರ ಹಲವಾರು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಆರೋಪಿಗಳಿಂದ ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,90,000 ರೂ. ಆಗಿರುತ್ತದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚೆಗೆ ಮಂಗಳೂರು ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ನಾಟೆಕಲ್, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಆಂಬಿಕಾ ರೋಡ್, ಉಚ್ಚಿಲ ಬಳಿಯಿಂದ ರಾತ್ರಿ ವೇಳೆಯಲ್ಲಿ ಮೂರು ದ್ವಿಚಕ್ರ ವಾಹನದ ಸವಾರರನ್ನು ಅಡ್ಡಗಟ್ಟಿ ಹಿಂದಿ ಭಾಷೆಯಲ್ಲಿ ಬೈದು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಅವರಿಂದ ಸ್ಕೂಟರ್ ಗಳನ್ನು ಬಲವಂತವಾಗಿ ಸುಲಿಗೆ ಮಾಡಿದ್ದರು, ಈ ಸ್ಕೂಟರ್ ನ ಪತ್ತೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದ ಸಮಯ ಇದೇ ಸಾಹೇಜ್ ಗಂಜ್ ದರೋಡೆ ಗ್ಯಾಂಗ್ ನ ಆರೋಪಿಗಳು ಜ್ಯುವೆಲ್ಲರಿ ದರೋಡೆ ನಡೆಸಲು ಸಂಚು ರೂಪಿಸುವ ಸಮಯ ಸ್ಥಳೀಯವಾಗಿ ಓಡಾಟದ ಸಲುವಾಗಿ ಈ ಸ್ಕೂಟರ್ ಗಳ ಸವಾರರಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಸುಲಿಗೆ ಮಾಡಲು ಉಪಯೋಗಿಸುತ್ತಿದ್ದರು. ಮೂರು ಸ್ಕೂಟರ್ ಗಳನ್ನು ಕೂಡಾ ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.

ಆರೋಪಿಗಳ ಪೈಕಿ ಭಾಸ್ಕರ ಬೆಳ್ಚಡ, ದಿನೇಶ್ ರಾವಲ್ ಇಂಜಮಾಮ್ ಉಲ್ ಹಕ್, ಬಿಸ್ತ ರೂಪ್ ಸಿಂಗ್, ಕೃಷ್ಣ ಬಹದ್ದೂರ್ ಬೋಗಟಿ ಎಂಬವರ ವಿರುದ್ಧ ಮುಂಬೈ,ಪುಣಿ, ಸೂರತ್, ಮಧ್ಯಪ್ರದೇಶದ ಮಾಧವ ನಗರ, ಕೇರಳದ ತ್ರಿಶೂರ್, ಪಂಜಾಬ್ ರಾಜ್ಯಗಳಲ್ಲಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಬ್ಯಾಂಕ್ ದರೋಡೆ, ಜ್ಯುವೆಲ್ಲರಿ ದರೋಡೆ ಪ್ರಕರಣಗಳು ದಾಖಲಾಗಿರುತ್ತದೆ. ಈ ಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ, ಪ್ರದೀಪ ಟಿ ಆರ್, ಎಎಸ್ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.

ಸಾಹೇಬ್ ಗಂಜ್ ಗ್ಯಾಂಗ್

ಸಾಹೇಬ್ ಗಂಜ್ ಗ್ಯಾಂಗ್ ಎಂಬುವುದು ಉತ್ತರ ಭಾರತದ ಜಾರ್ಖಂಡ್ ರಾಜ್ಯದ ಕುಖ್ಯಾತ ದರೋಡೆ ಗ್ಯಾಂಗ್ ಆಗಿದ್ದು, ಈ ಗ್ಯಾಂಗ್ ನಲ್ಲಿನಲ್ಲಿ ನೇಪಾಳ ದೇಶದ ಪ್ರಜೆಗಳು ಕೂಡಾ ಇದ್ದು, ಇವರು ಪ್ರಮುಖವಾಗಿ ದೊಡ್ಡ ದೊಡ್ಡ ನಗರಗಳಲ್ಲಿನ ಬ್ಯಾಂಕ್, ಜ್ಯುವೆಲ್ಲರಿ ಅಂಗಡಿಗಳನ್ನು ಗುರುತಿಸಿ ಅಲ್ಲಿಯ ಪರಿಸರದಲ್ಲಿ ಬಾಡಿಗೆಗೆ ಮನೆ/ಲಾಡ್ಜ್ ಗಳನ್ನು ಮಾಡಿಕೊಂಡು ಸ್ಥಳೀಯವಾಗಿ ದರೋಡೆ ಮಾಡಲು ಬೇಕಾದ ಸಲಕರಣೆಗಳನ್ನು ಖರೀದಿಸಿಕೊಂಡು ನಂತರ ಜ್ಯುವೆಲ್ಲರಿ ಅಂಗಡಿ, ಬ್ಯಾಂಕ್ ಗಳ ಗೋಡೆ ಕನ್ನ ಕೊರೆದು, ಗ್ಲಾಸ್ ಕಟ್ಟರ್ ಮೂಲಕ ತಿಜೋರಿಯನ್ನು ಒಡೆದು ಕೋಟ್ಯಂತರ ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡುವ ಕುಖ್ಯಾತ ಗ್ಯಾಂಗ್ ಆಗಿದ್ದು, ಈ ಗ್ಯಾಂಗ್ ನಲ್ಲಿದ್ದವರು ದೇಶದ ವಿವಿಧಡೆಗಳಲ್ಲಿ ಈ ಹಿಂದೆ ನಡೆದ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾರೆ. ಈ ಗ್ಯಾಂಗ್ ನಲ್ಲಿ ನೇಪಾಳ ದೇಶದ ಹಲವಾರು ಮಂದಿ ಆರೋಪಿಗಳಿದ್ದು, ಇವರು ಕೃತ್ಯ ನಡೆಸಿದ ನಂತರ ಸೊತ್ತಿನೊಂದಿಗೆ ನೇಪಾಳಕ್ಕೆ ಪರಾರಿಯಾಗುತ್ತಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು