News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು

Chief Minister arrives at Bajpe International Airport
Photo Credit : News Kannada

ಮಂಗಳೂರು: ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಗರದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜು.28ರ ಗುರುವಾರ ಆಗಮಿಸಿದರು.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಪ್ರವೀಣ್ ನೆಟ್ಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಂಧನವಾಗಿದೆ ಶೀಘ್ರದಲ್ಲೇ ಉಳಿದವರ ಬಂಧನ ಮಾಡಲಾಗುವುದು ಎಂದರು.

ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ಪೊಲೀಸರಿಗೆ ತನಿಖೆ ಗೆ ಮುಕ್ತ ಅವಕಾಶ ನೀಡಲಾಗಿದೆ. ಸಂತ್ರಸ್ತರ ಮನೆಗೆ ಭೇಟಿ ನೀಡಿದ ಬಳಿಕ ಪರಿಹಾರದ ಘೋಷಣೆ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳೀನ್ ಕುಮಾರ್ ಕಟೀಲ್, ನಾಯಕರಾದ ಸಿ.ಟಿ ರವಿ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ಆಯುಕ್ತ ಶಶಿ ಕುಮಾರ್ ಹಾಗೂ ಇತರೆ ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು