News Karnataka Kannada
Monday, April 29 2024
ಮಂಗಳೂರು

ಮಂಗಳೂರು: 3 ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

Steps to distribute kuchchalakki to ration consumers in Dakshina Kannada-Udupi districts from October-November
Photo Credit : News Kannada

ಮಂಗಳೂರು: ಬಹುನಿರೀಕ್ಷಿತ ಉಡುಪಿ ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸುತ್ತಲೇ ಸೇರಿದ ಬಿಜೆಪಿ ಕಾರ್ಯಕರ್ತರು ಮತ್ತು ನೆರೆದ ಸಾರ್ವಜನಿಕರು ಹರ್ಷೋದ್ಗಾರದ ಮೂಲಕ ಸ್ವಾಗತಿಸಿದರು.

ಈಗ ನೀಡುತ್ತಿರುವ ಪಡಿತರ ಅಕ್ಕಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುತ್ತಿಲ್ಲವೆಂಬ ಹಿನ್ನೆಲೆಯಲ್ಲಿ ಪಡಿತರ ವ್ಯವಸ್ಥೆಗೆ ಕುಚಲಕ್ಕಿ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಲೇ ವೇದಿಕೆಯಲ್ಲಿ ಎದ್ದು ನಿಂತು ಮುಖ್ಯಮಂತ್ರಿಗಳಿಗೆ ಕೈಮುಗಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದರು.

ಸುಮಾರು ಪ್ರತಿ ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿ ವಿತರಣೆ ಮಾಡುವಾಗ ಸುಮಾರು 152 ಕೋಟಿ ರೂಪಾಯಿ ಸರ್ಕಾರಕ್ಕೆ ವಿಶೇಷ ಖರ್ಚು ಬರಲಿದ್ದು ಸಚಿವ ಕೋಟಾರವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಅನೇಕ ಸಭೆಗಳು ನಡೆದಿದ್ದವು. ಇದೀಗ ಮುಖ್ಯಮಂತ್ರಿಗಳ ಘೋಷಣೆಯೊಂದಿಗೆ ಪಡಿತರದಲ್ಲಿ ಕುಚಲಕ್ಕಿ ವಿತರಣೆ ಜಾರಿಗೆ ಬಂದಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು