News Karnataka Kannada
Friday, May 17 2024
ಮಂಗಳೂರು

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ: ಮೇಯರ್​ ಆಗಿ ಸುಧೀರ್ ಶೆಟ್ಟಿ ಆಯ್ಕೆ

Mangaluru City Corporation to join BJP
Photo Credit : News Kannada

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್​ ಹುದ್ದೆಗೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ ನಿರೀಕ್ಷೆಯಂತೆ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಸುನಿತಾ ಆಯ್ಕೆಯಾಗಿದ್ದಾರೆ.

ಈ ಹಿಂದಿನ ಅವಧಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ಸದಸ್ಯ ಮೇಯರ್ ಆಗಿದ್ದರು. ಈ ಬಾರಿ ಮಂಗಳೂರು ದಕ್ಷಿಣ ಕ್ಷೇತ್ರದ ಸದಸ್ಯ ಸುಧೀರ್ ಶೆಟ್ಟಿ ಅವರಿಗೆ ಮೇಯರ್​ ಹುದ್ದೆ ಒಲಿದುಬಂದಿದೆ. ಇನ್ನು ಪರಿಶಿಷ್ಟ ಜಾತಿಯ ಏಕೈಕ ಸದಸ್ಯೆ ಪಣಂಬೂರು ವಾರ್ಡ್​ನ ಸುನೀತಾ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸುಧೀರ್ ಶೆಟ್ಟಿ ಅವರು ಮೂರನೇ ಬಾರಿಗೆ ಪಾಲಿಕೆಗೆ ಆಯ್ಕೆಯಾಗಿದ್ದಾರೆ. ಪಾಲಿಕೆಯ ಒಟ್ಟ 60 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 14, ಹಾಗೂ ಎಸ್​ಡಿಪಿಐ 2 ಸ್ಥಾನಗಳನ್ನು ಹೊಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು