Categories: ಮಂಗಳೂರು

ಸುರತ್ಕಲ್: ಐತಿಹಾಸಿಕ ಟೋಲ್ ತೆರವು ಹೋರಾಟದ ಸಿದ್ದತೆಗೆ ಮಂಗಳೂರು ನಗರ ಮಟ್ಟದ ಯಶಸ್ವಿ ಸಭೆ

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗಾಗಿ ಅಕ್ಟೋಬರ್ 18ರಂದು ನೇರ ಕಾರ್ಯಾಚರಣೆ ಟೋಲ್ ಗೇಟ್ ಮುತ್ತಿಗೆ ಕಾರ್ಯಕ್ರಮದ ತಯಾರಿಗಾಗಿ ಮಂಗಳೂರು ನಗರ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಿದ್ದತಾ ಸಭೆಯು ಇಂದು ( 01-10-2022) ನಗರದ ವುಡ್ ಲ್ಯಾಂಡ್ ಹೋಟೇಲ್ ನಲ್ಲಿ ನಡೆಯಿತು.

ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವರುಷ ಅಕ್ರಮವಾಗಿ ಪೂರೈಸಿದೆ. ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಿರಂತರ ಹೋರಾಟ ನಡೆದು ಇತ್ತೀಚೆಗೆ ಸಪ್ಟೆಂಬರ್ ತಿಂಗಳಲ್ಲಿ ನಡೆದ ಸಾಮೂಹಿಕ ಧರಣಿಯ ಸಂದರ್ಭ ಸ್ವತಃ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಕೆಲವೇ ದಿನಗಳಲ್ಲಿ ಸುರತ್ಕಲ್ ಟೋಲ್ ತೆರವುಗೊಳ್ಳಲಿದೆ ಎಂದು ತಿಳಿಸಿದರೂ.

ಈ ಬಗ್ಗೆ ಯಾವುದೇ ಬೆಳವಣೆಗೆಗಳು ಕಾಣದೆ ತೆರವು ಪ್ರಕ್ರಿಯೆ ಹಳೆಯ ಅನುಭವದಂತೆ ಚಲಿಸದೆ ನಿಂತಿದೆ. ಈ ಹಿನ್ನಲೆಯಲ್ಲಿ ಹೋರಾಟ ಸಮಿತಿಯ ತೀರ್ಮಾನದಂತೆ ಅಕ್ಟೋಬರ್ 18ರಂದು ನೇರ ಕಾರ್ಯಾಚರಣೆ, ಟೋಲ್ ಗೇಟ್ ಮುತ್ತಿಗೆ ಯಶಸ್ವಿಗೊಳಿಸಲು ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಸಮಾನ ಮನಸ್ಕ ಸಂಘಟನೆಗಳು ಒಮ್ಮತದ ತೀರ್ಮಾನವನ್ನು ಕೈಗೊಂಡಿದೆ.

ಇನ್ನು ಪ್ರಚಾರದ ಭಾಗವಾಗಿ ನಗರದ ವಿವಿಧ ಭಾಗದ ಪ್ರದೇಶ ಮಟ್ಟದಲ್ಲಿ ಸಭೆಗಳನ್ನು ನಡೆಸುವುದು, ವ್ಯಾಪಕ ಕರಪತ್ರಗಳನ್ನು ಹಂಚುವುದು, ಸ್ಥಳೀಯ ಸಂಘ ಸಂಸ್ಥೆಗಳ, ಯುವಕ ಮಂಡಲಗಳು ಕಾರ್ಯಕ್ರಮಕ್ಕೆ ಬೆಂಬಲಿಸಿ ಭಾಗವಹಿಸುವಂತೆ ಪ್ರೇರೇಪಿಸುವುದು ಹಾಗೂ ಇದೇ ಬರುವ ಅಕ್ಟೋಬರ್ 10ರಂದು ಮಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳುವ ತೀರ್ಮಾನವನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಕಾರ್ಯಕ್ರಮದ ರೂಪುರೇಷೆಯ ಕುರಿತು ಮಾತನಾಡಿದರು.

ಸಾಮಾಜಿಕ ಹೋರಾಟಗಾರ ಎಂಜಿ ಹೆಗಡೆ, ಜನಪರ ಚಿಂತಕರಾದ ರೋಯ್ ಕ್ಯಾಸ್ಟಲಿನೋ, ಹಿರಿಯ ವಕೀಲರಾದ ಯಶವಂತ ಮರೋಳಿ, ರಾಮಚಂದ್ರ. ಬಿ, ಕಾರ್ಪೊರೇಟರ್ ಲತೀಫ್ ಕಂದುಕ, ಮಾಜಿ ಕಾರ್ಪೊರೇಟರ್ ಗಳಾದ ಪ್ರಕಾಶ್ ಸಾಲ್ಯಾನ್, ದಯಾನಂದ ಶೆಟ್ಟಿ, ಅಝೀಝ್ ಕುದ್ರೋಳಿ, ಜಯಂತಿ ಬಿ ಶೆಟ್ಟಿ , ಸಿಪಿಐ ಜಿಲ್ಲಾ ನಾಯಕರಾದ ಬಿ ಶೇಖರ್, ವಿ.ಕುಕ್ಯಾನ್, ಸೀತಾರಾಮ ಬೇರಿಂಜ, ಕರುಣಾಕರ್, ಪುಷ್ಪಾ ರಾಜ್ ಬೋಳೂರು, CPIM ಮುಖಂಡರಾದ ಸುನಿಲ್ ಕುಮಾರ್ ಬಜಾಲ್, ಡಾ.ಕ್ರಷ್ಣಪ್ಪ ಕೊಂಚಾಡಿ, ಜೆಡಿಎಸ್ ಮುಖಂಡರಾದ ಸುಮತಿ ಎಸ್ ಹೆಗ್ಡೆ, ಅಲ್ತಾಫ್ ತುಂಬೆ, ಡಿವೈಎಫ್ಐ ಮುಖಂಡರಾದ ಬಿ.ಕೆ.ಇಮ್ತಿಯಾಜ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ನೌಷಾದ್ ಬೆಂಗರೆ, ಯುವ ವಕೀಲರಾದ ನಿತಿನ್ ಕುತ್ತಾರ್, ಚರಣ್ ಶೆಟ್ಟಿ, ಸುನಂದಾ ಕೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಪ್ರಮೀಳಾ ದೇವಾಡಿಗ, ಮಹಿಳಾ ಮುಖಂಡರಾದ ಭಾರತಿ ಬೋಳಾರ, ಪ್ರಮೀಳಾ ಶಕ್ತಿನಗರ, ಕಾರ್ಮಿಕ ನಾಯಕರಾದ ಯೋಗೀಶ್ ಜಪ್ಪಿನಮೊಗರು, ವಿಲ್ಲಿ ವಿಲ್ಸನ್, ಟೆಂಪೋ ಚಾಲಕ ರ ಸಂಘದ ನಾಯಕರಾದ ಸಿರಾಜ್, ರಾಣಿ ಅಬ್ಬಕ್ಕ ಬಸ್ ನೌಕರರರ ಸಂಘದ ನಾಯಕರಾದ ಜಗದೀಶ್, ಪಲ್ಘುಣಿ ಮೀನುಗಾರರ ಸಂಘದ ಮುಖಂಡರಾದ ತಯ್ಯುಬ್ ಬೆಂಗರೆ , ಟ್ಯಾಕ್ಸಿ ಚಾಲಕರ ಸಂಘದ ಶ್ರೀನಿವಾಸ್ , ಫಯಾಝ್ ಅಮ್ಮೆಂಬಳ ಮುಂತಾದವರು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಮಾಜಿ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ವಹಿಸಿದ್ದರು.

Sneha Gowda

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

21 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago