Categories: ಮಂಗಳೂರು

ಮಂಗಳೂರು: ಸ್ವಚ್ಛ ಸುಂದರ ಬೀಚ್ – ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು:  ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದೆ ಈ ನಿಟ್ಟಿನಲ್ಲಿ ಬೀಚ್‌ಗಳ ಸ್ವಚ್ಛತೆ ಹಾಗೂ ಸೂಕ್ತ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ,ಕ್ರೆಡೈ ಮಂಗಳೂರು, ಮತ್ತು ಶಕ್ತಿ ನಗರದ ಶಕ್ತಿ ಶಿಕ್ಷಣ ಸಮೂಹ ಸಂಸ್ಥೆ ಗಳ ಪಣಂಬೂರು ಬೀಚ್ ನಲ್ಲಿ ಸ್ವಚ್ಛ ಸುಂದರ ಬೀಚ್ ‘ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶ ಹಾಗೂ ನದಿ,ಕಡಲ ತೀರವನ್ನು ಹೊಂದಿ ದೆ. ತುಳುನಾಡಿನ ಸಮೃದ್ಧವಾದ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಜಿಲ್ಲೆಯ ಬೀಚ್‌ಗಳು ಹಾಗೂ ಇಲ್ಲಿನ ಪ್ರವಾಸಿ ತಾಣಗಳಿಗೆ ದೇಶ ವಿದೇಶದಿಂದ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಆದುದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಹೂಡಿಕೆಗೆ ಸರ್ಕಾರ ಅವಕಾಶ ಕಲ್ಪಿಸುತ್ತಿದೆ. ಈ ನಿಟ್ಟಿನಲ್ಲಿ ಬೀಚ್ ಗಳ ಸಚ್ಛತೆಗಾಗಿ ಸಾಮೂಹಿಕ ಸಹಭಾ ಗಿತ್ವದಲ್ಲಿ ತೊಡಗಿಸಿ ಕೊಂಡಿರುವುದು ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಕ್ರೆಡೈ ಮಂಗಳೂರು ಇದರ ಅಧ್ಯಕ್ಷ ಪುಷ್ಪರಾಜ್ ಜೈನ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಸನಿಲ್, ಮುರುಗೇಶ್ (ಹಿರಿಯ ಪ್ರಬಂಧಕರು ಕೆಐಒಸಿಎಲ್ ಪಣಂಬೂರು) ಲಕ್ಷ್ಮೀಶ ಭಂಡಾರಿ (ಪಾಲುದಾರರು, ಎಲ್ ಆರ್ ಎಸ್ ಬೀಚ್ ಟೂರಿಸಂ ಪಣಂಬೂರು.) ಡಾ.ರಾಜೇಶ್ ಹುಕ್ಕೇರಿ (ಪಾಲುದಾರರು, ಎಲ್ ಆರ್ ಎಸ್ ಬೀಚ್ ಟೂರಿಸಂ ಪಣಂಬೂರು)ಶಕ್ತಿ ಶಿಕ್ಷಣ ಸಮೂಹ ಸಂಸ್ಥೆ ಗಳ ಆಡಳಿತಾ ಧಿಕಾರಿ ರಮೇಶ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯ ಕಾರಿ ಸಮಿತಿ ಸದಸ್ಯ ರಾದ ರಾಜೇಶ್ ದಡ್ಡಂಗಡಿ, ಆರೀಫ್ ಪಡುಬಿದ್ರಿ, ಸುಖ್‌ಪಾಲ್ ಪೊಳಲಿ, ರಾಷ್ಟ್ರೀಯ ಪತ್ರ ಕರ್ತರ ಒಕ್ಕೂಟದ ಕಾರ್ಯ ಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಇನ್ನರ್ ವೀಲ್ ಮಂಗಳೂರು ನಾರ್ತ್ ನ ಅಧ್ಯಕ್ಷೆ ವಸಂತಿ ಕಾಮತ್ , ಕಾರ್ಯದರ್ಶಿ ಗೀತಾ ರೈ, ಮೊದಲಾದವರು ಭಾಗವಹಿಸಿದ್ದರು.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

5 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago