News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಡಿ. 23ರಿಂದ ಜ.1ರ ವರೆಗೆ ಕರಾವಳಿ ಉತ್ಸವ

Money is your election agenda, not Hindutva: Sunil Kumar to Muthalik
Photo Credit : Facebook

ಮಂಗಳೂರು, ಅ.3: ಮುಂಬರುವ ಡಿಸೆಂಬರ್ 23 ರಿಂದ ಜನವರಿ ಒಂದರವರೆಗೆ ನಗರದ ತಣ್ಣೀರು ಬಾವಿ ಕಡಲ ತಡಿಯಲ್ಲಿ ಕರಾವಳಿ ಉತ್ಸವವನ್ನು ಹಮ್ಮಿಕೊಳ್ಳಲಾಗುವುದು, ಅದಕ್ಕೆ ಅಗತ್ಯವಿರುವ ಉಪ ಸಮಿತಿಗಳ ರಚನೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಪ್ರಕಟಿಸಿದರು.

ಈ ಕುರಿತು ಅವರು ಅ.3ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರಾವಳಿ ಉತ್ಸವಕ್ಕೆ ಸರ್ಕಾರದ ಅನುದಾನ, ಖಾಸಗಿ ಪ್ರಾಯೋಜಕತ್ವ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಸ್ತು ಪ್ರದರ್ಶನ, ಬೀಚ್ ಉತ್ಸವ, ರಿವರ್ ಫೆಸ್ಟಿವಲ್ ಆಯೋಜನೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ ಸಚಿವರು, ಕರಾವಳಿ ಉತ್ಸವವನ್ನು ಪ್ರಮುಖವಾಗಿ ಸಾಂಸ್ಕೃತಿಕವಾಗಿ ಹಾಗೂ ಪ್ರವಾಸೋದ್ಯಮಕ್ಕೆ ಪೂರಕವಾಗಿ ಆಯೋಜನೆ ಮಾಡಲಾಗುವುದು, ಈ ಬಗ್ಗೆ ಉಪ ಸಮಿತಿಗಳಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು, ಈ ಉತ್ಸವ ಯಶಸ್ವಿಯಾಗಲು ಈ ಹಿಂದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಅನುಭವ ಹಾಗೂ ಸಲಹೆ ಅಗತ್ಯ, ಸಹಕರಿಸುವಂತೆ ಸಚಿವರು ಕೋರಿದರು.

ತಣ್ಣೀರು ಬಾವಿ ಕಡಲ ತೀರ ಪ್ರಧಾನ ವೇದಿಕೆಯನ್ನಾಗಿ ಕಾರ್ಯಕ್ರಮ ರೂಪಿಸಲಾಗುವುದು,ಅಲ್ಲಿಯೇ ಆಹಾರ ಮೇಳವನ್ನು ಆಯೋಜಿಸಲಾಗುವುದು, ಕದ್ರಿ ಪಾರ್ಕ್ ಸೇರಿದಂತೆ ಇತರೆ ಪ್ರಮುಖ ಸ್ಥಳಗಳಲ್ಲಿ ಉಪ ವೇದಿಕೆಗಳಿಗೆ ಅವಕಾಶ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರು ಮಾತನಾಡಿ, ಕೋವಿಡ್ ಸೋಂಕಿನಿಂದಾಗಿ ಕಳೆದ ಎರಡು ವರ್ಷಗಳಿಂದ ಕರಾವಳಿ ಉತ್ಸವವನ್ನು ಹಮ್ಮಿಕೊಂಡಿಲ್ಲ, ಸಾಂಸ್ಕೃತಿಕ ವೇದಿಕೆಯಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರರು ವೇದಿಕೆಯಲ್ಲಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಿಸಿದವರು ಸಭೆಯಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು