News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಜಿಲ್ಲಾಧಿಕಾರಿಯವರ ಮೊಬೈಲ್ ನಂಬರ್ ಹ್ಯಾಕ್- ಮೋಸ ಹೋಗದಂತೆ ಡಿಸಿ ಮನವಿ

Mangaluru: Dc's mobile number hacked, DC urges people not to be cheated
Photo Credit : News Kannada

ಮಂಗಳೂರು, ಸೆ.14: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು.

ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.

8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು