Categories: ಮಂಗಳೂರು

ಹಿಂದುತ್ವದ ಹೆಸರಿನಲ್ಲಿ ಗೆದ್ದು ಹಿಂದೂಗಳಿಗೆ ದ್ರೋಹ ಬಗೆಯುವ ಬಿಜೆಪಿಯನ್ನು ಸೋಲಿಸಿ- ಅನುಪಮ ಶೆಣೈ

ಮಂಗಳೂರು: “10% ಸರಕಾರ ಎಂದು ಹಿಂದಿನ ಸರಕಾರವನ್ನು ದೂಷಿಸಿ ಹಿಂದುತ್ವದ ಹೆಸರಿನಲ್ಲಿ ಡಬಲ್ ಇಂಜಿನ್ ಸರಕಾರ ರಚಿಸಿ ಬ್ರಷ್ಟಾಚಾರವನ್ನು 40% ಗೆ ತಲುಪಿದ ಮೋದಿಯವರು ಇಂದು ಬ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿಲ್ಲ. ಎಲ್ಲಾ ಕಡೆ ಭ್ರಷ್ಟರಿಗೆ ಪ್ರಾಶಸ್ತ್ಯ ನೀಡುವುದು ಕಾಣುತ್ತಿದೆ” ಎಂದು ಭ್ರಷ್ಟಾಚಾರದ ವಿರುದ್ಧ ಹೋರಾಡಿ ತನ್ನ ಡಿವೈಎಸ್ಪಿ ಪದವಿಯನ್ನು ತ್ಯಾಗ ಮಾಡಿದ್ದ ಅನುಪಮಾ ಶೆಣೈ ಅವರು ಹೇಳಿದ್ದಾರೆ.

ಪುಲ್ವಾಮದಲ್ಲಿ ಉಗ್ರರ ದಾಳಿಯಲ್ಲಿ 40 ಯೋಧರು ಸಾಯಲು ಮೋದಿ ಸರಕಾರದ ನಿರ್ಲಕ್ಷವೇ ಕಾರಣ ಎಂದು ಇತ್ತೀಚೆಗೆ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಹೇಳಿರುವುದನ್ನು ಉಲ್ಲೇಖಿಸಿದ ಅವರು ಮೋದಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ಮಂಗಳೂರು ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಂತೋಷ ಕಾಮತ್ ಅವರ ಪರವಾಗಿ ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ ಎದುರು ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಅಭ್ಯರ್ಥಿ ಸಂತೋಷ ಕಾಮತ್ ಅವರು ಮಾತನಾಡಿ ಪ್ರಾಮಾಣಿಕ, ಸ್ವಚ್ಛ, ಬ್ರಷ್ಟಾಚರ ರಹಿತ ಆಡಳಿತ ನೀಡುವ ಆಶ್ವಾಸನೆ ನೀಡಿದರು.

ವೆಂಕಟೇಶ್ ಬಾಳಿಗಾ ಮತ್ತು ಜೆ.ಪಿ. ರಾವ್ ಮತ ಯಾಚಿಸಿದರು. ಪ್ರಾಸ್ತಾವಿಕ ಮಾತುಗಳನ್ನು ಆಡಿದ ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ತಾವರ್ಸ್ ಸ್ಮಾರ್ಟ್ ಸಿಟಿಯ ಹೆಸರಿನಲ್ಲಿ ಆಗುತ್ತಿರುವ ಅನ್ಯಾಯಗಳನ್ನು ವಿವರಿಸಿದರು. ಜೇಮ್ಸ್ ಡೇಸಾ, ಪ್ರಸಾದ್ ಬಜೀಲಕೆರಿ, ನಝೀರ್ ಅಹ್ಮದ್ ಮತ್ತಿತರರು ಉಪಸ್ಥತರಿದ್ದರು. ಬಳಿಕ ಪರಿಸರದಲ್ಲಿ ಮನೆ ಮನೆ ಪ್ರಚಾರ ಜರಗಿತು.

Gayathri SG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

6 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

6 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

6 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

7 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

7 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

7 hours ago